‘ದಿಗಂತದಾಚೆಗೆ: ಸ್ಥೈರ್ಯಕ್ಕಾಗಿ ಒಂದು ಸವಾರಿ’ ಎಂಬ ರಾಷ್ಟ್ರೀಯ ಮಾನಸಿಕ ಆರೋಗ್ಯ ಜಾಗೃತಿ ಅಭಿಯಾನ ಹಮ್ಮಿಕೊಂಡು ತಮ್ಮ ವೈಯಕ್ತಿಕ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.
ಮಾನಸಿಕ ಆರೋಗ್ಯದ ಸಮಸ್ಯೆಗಳ ಕುರಿತು ಮುಕ್ತವಾಗಿ ಮಾತನಾಡುವ ಮೂಲಕ ಕಳಂಕವನ್ನು ದೂರಗೊಳಿಸಬೇಕು ಹಾಗೂ ಅಗತ್ಯವಿದ್ದಾಗ ವೃತ್ತಿಪರ ನೆರವು ಪಡೆಯಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ರೆಡ್‌ಕ್ರಾಸ್ ಘಟಕದ ಜಿಲ್ಲಾ ಕಾರ್ಯದರ್ಶಿ ಗಣನಾಥ ಶೆಟ್ಟಿ ಯೆಕ್ಕಾರು ಭಾರತದಲ್ಲಿ ಮಾನಸಿಕ ಆರೋಗ್ಯದ ಸಮಸ್ಯೆಯನ್ನು ಅನೇಕರು ಮೌನವಾಗಿ ಎದುರಿಸುತ್ತಿದ್ದಾರೆ. ದೈಹಿಕ, ಮಾನಸಿಕ ಹಾಗೂ ಸಾಂಸ್ಕೃತಿಕ ಆರೋಗ್ಯದ ಕಾಳಜಿ ವಹಿಸುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲೆ ಪ್ರೊ. ನಿಕೇತನ ಮಾತನಾಡಿ, ವೈಯಕ್ತಿಕ ಅನುಭವಗಳ ಮೂಲಕ ಯುವಜನರನ್ನು ತಲುಪಿ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುತ್ತಿರುವ ಸೆಹರ್ ಹಶ್ಮಿ ಅವರು ಯುವಜನರಿಗೆ ಮಾದರಿಯಾಗಿದ್ದಾರೆ ಎಂದರು.
ಆ. 20ರಂದು ದೆಹಲಿಯಲ್ಲಿ ನಟಿ ಶರ್ಮಿಳಾ ಟಾಗೋರ್ ಅವರಿಂದ ಚಾಲನೆ ಪಡೆದಿರುವ ಅಭಿಯಾನವು ದೆಹಲಿ–ಕನ್ಯಾಕುಮಾರಿ–ದೆಹಲಿ ಮಾರ್ಗದಲ್ಲಿ 50 ನಗರಗಳಲ್ಲಿ 100 ಮಾನಸಿಕ ಆರೋಗ್ಯ ಕಾರ್ಯಾಗಾರಗಳನ್ನು ನಡೆಸುವ ಉದ್ದೇಶ ಹೊಂದಿದೆ.
ಐಕ್ಯೂಎಸಿ ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ, ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ಕೃಷ್ಣ ಭಟ್ ಹಾಗೂ ಅಭಿಯಾನದ ತಂಡದ ಸದಸ್ಯರಾದ ಫರ್ಹತ್ ಖಾನ್, ಸನ್ನಿ ಲೋಚವ್ ಮತ್ತು ರಾಕೇಶ್ ಸೈನಿ ಉಪಸ್ಥಿತರಿದ್ದರು.
ಮನಃಶಾಸ್ತ್ರ ವಿಭಾಗದ ಮುಖ್ಯಸ್ಥೆ ರಮ್ಯಾ ವಿ. ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ರೆಡ್ ಕ್ರಾಸ್ ನ ಯೋಜನಾಧಿಕಾರಿ ಮುಖ್ಯಸ್ಥೆ ಕವಿತಾ ಸ್ವಾಗತಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

