ಶ್ರೀ ಪೇಜಾವರ ಶ್ರೀಗಳ ಚಾತುರ್ಮಾಸ್ಯದಲ್ಲಿ ಶುಭಾಶೀರ್ವಾದ ಪಡೆದ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ರಾಮ್ ಮಾಧವ್

Upayuktha
0



ನವದೆಹಲಿ: ಇಲ್ಲಿನ ವೇದವ್ಯಾಸ ಗುರುಕುಲದಲ್ಲಿ ನಡೆಯುತ್ತಿರುವ ಶ್ರೀ ಪೇಜಾವರ ಮಠಾಧೀಶರ ಚಾತುರ್ಮಾಸ್ಯ ವ್ರತ ಮಹೋತ್ಸವಕ್ಕೆ ಪ್ರಮುಖ ಗಣ್ಯರ ಭೇಟಿ ಮುಂದುವರಿದಿದೆ.


ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರು, ಹಿರಿಯ ಲೇಖಕರು ಹಾಗೂ ರಾಷ್ಟ್ರವಾದಿ ಚಿಂತಕರೂ ಆದ ರಾಮ್ ಮಾಧವ್ ಅವರು ಸೋಮವಾರ ಸಂಜೆ ವೇದವ್ಯಾಸ ಗುರುಕುಲಕ್ಕೆ ಆಗಮಿಸಿ, ಶ್ರೀ ಕೃಷ್ಣ ದೇವರ ದರ್ಶನ ಪಡೆದರು.


ನಂತರ ಶ್ರೀ ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ರಾಮ್ ಮಾಧವ್ ಅವರು, ಶ್ರೀಗಳಿಂದ ಮಾಲಾರ್ಪಣೆ ಹಾಗೂ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿ ಶುಭಾಶೀರ್ವಾದ ಪಡೆದುಕೊಂಡರು.


ಈ ಸಂದರ್ಭದಲ್ಲಿ ಹಲವು ಪ್ರಮುಖ ವಿಚಾರಗಳ ಕುರಿತು ಶ್ರೀಗಳೊಂದಿಗೆ ಚರ್ಚಿಸಿದ ಅವರು, ಚಾತುರ್ಮಾಸ್ಯದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಕೃತಾರ್ಥರಾದರು. ಈ ವೇಳೆಯಲ್ಲಿ ಪೀಠದ ಶಿಷ್ಯರು ಹಾಗೂ ಪ್ರಮುಖ ಧಾರ್ಮಿಕ ಧುರೀಣರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top