ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆ: ಜಯಪ್ರಕಾಶ್ ಹೆಗ್ಡೆ, ಶಾಸಕ ಗುರ್ಮೆ ಸುರೇಶ್ ಶೆಟ್ಟಿಗೆ ಮನವಿ ಸಲ್ಲಿಕೆ

Upayuktha
0

 



ಉಡುಪಿ: ಮಂಗಳೂರಿನಲ್ಲಿ ಸೆಪ್ಟೆಂಬರ್ 18 ರಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗಕ್ಕೆ ಹೈಕೋರ್ಟ್ ಪೀಠ ಸ್ಥಾಪಿಸುವ ಕುರಿತು ವಿಷಯವನ್ನು ಸೇರ್ಪಡೆಗೊಳಿಸಿ, ಸರ್ಕಾರದ ಹಂತದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಉಡುಪಿ ಜಿಲ್ಲಾ ಸಂಚಾಲಕರಾದ ಪ್ರೇಮ್ ಪ್ರಸಾದ್ ಶೆಟ್ಟಿ ಅವರು ಮಾಜಿ ಸಂಸದ ಹಾಗೂ ಸಚಿವ ಜಯಪ್ರಕಾಶ್ ಹೆಗ್ಡೆ ಮತ್ತು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು.


ಕರಾವಳಿ ಜಿಲ್ಲೆಗಳ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಪೀಠ ಸ್ಥಾಪನೆಯಿಂದ ಈ ಭಾಗದ ಸಾರ್ವಜನಿಕರಿಗೆ ಹಾಗೂ ವಕೀಲರಿಗೆ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ಬರುವ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ, ಸರ್ಕಾರದ ಮೇಲೆ ಒತ್ತಡ ತರುವಂತೆ ನಾಯಕರಲ್ಲಿ ವಿನಂತಿಸಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ಹೋರಾಟ ಸಮಿತಿಯ ಮುಖಂಡರಾದ ವಿಜಯ್ ಡಿಸೋಜ, ಮಾಧವ, ಸುರೇಶ ಕಾಮತ್, ಕು. ಸರಿತಾ, ಶ್ರೀಮತಿ ಪೌರ್ಣಮಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.



Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top