ಶಂಕರನಾರಾಯಣ: "ವಿದ್ಯಾರ್ಥಿಗಳು ಕಾಲೇಜು ಶಿಕ್ಷಣ ಪೂರ್ಣಗೊಂಡ ನಂತರವೂ ನಿರಂತರವಾಗಿ ಅಧ್ಯಯನಶೀಲರಾಗಿರಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಮನಸ್ಸಿನಲ್ಲಿ ಅವಿರತವಾದ ಛಲವಿರಬೇಕು. ಸೋಲನ್ನು ಗೆಲುವಿನ ಮೊದಲ ಮೆಟ್ಟಿಲಾಗಿ ಸ್ವೀಕರಿಸಿ ಪ್ರಯತ್ನಿಸಿದಾಗ ಮಾತ್ರ ಯಶಸ್ಸು ಸಾಧ್ಯ," ಎಂದು ಚಂಡೀಗಢ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಹಿರಿಯ ಐಎಎಸ್ ಅಧಿಕಾರಿ ಎಚ್. ರಾಜೇಶ್ ಪ್ರಸಾದ್ ಅಭಿಪ್ರಾಯಪಟ್ಟರು.
ಅವರು ಸ್ಥಳೀಯ ಶಂಕರನಾರಾಯಣ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ 'ಸ್ಪರ್ಧಾತ್ಮಕ ಪ್ರೇರಣಾ ಕಾರ್ಯಕ್ರಮ'ವನ್ನು ಉದ್ಘಾಟಿಸಿ, ದಿಕ್ಸೂಚಿ ವಿಶೇಷ ಉಪನ್ಯಾಸ ನೀಡಿದರು. ಸಾಧನೆಗೆ ಯಾವುದೇ ಭಾಷೆ ತೊಡಕಾಗುವುದಿಲ್ಲ, ಬದಲಾಗಿ ಬಳಸುವ ಭಾಷೆಯಲ್ಲಿ ಪ್ರಬುದ್ಧತೆ ಬೆಳೆಸಿಕೊಳ್ಳುವುದು ಅತ್ಯಗತ್ಯ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ವಹಿಸಿದ್ದರು. ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಅವರು ಪ್ರೇರಣಾತ್ಮಕ ಉಪನ್ಯಾಸ ನೀಡಿದರು. ಇದೇ ಶುಭ ಸಂದರ್ಭದಲ್ಲಿ ಕಾಲೇಜಿನ ವಾರ್ಷಿಕ ವಿಶೇಷ ಸಂಚಿಕೆ 'ಯುವ ಮಾನಸ'ವನ್ನು ಅನಾವರಣಗೊಳಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಡಾ. ವೆಂಕಟರಾಮ್ ಭಟ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ದಿವ್ಯಾ ಹಾಗೂ ಹಿರಿಯ ಉಪನ್ಯಾಸಕಿ ಡಾ. ನಳಿನಾ ಶ್ರೀ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


