ಖಾಲಿ ಇರುವ ಗ್ರಂಥಪಾಲಕರ ಹುದ್ದೆಗಳ ಶೀಘ್ರ ಭರ್ತಿಗೆ ಆಗ್ರಹ

Upayuktha
0

ಅಕ್ಟೋಬರ್ 5ರ ಹೋರಾಟಕ್ಕೆ ದಕ್ಷಿಣ ಕನ್ನಡ ಮತ್ತು ಕೊಡಗು ಗ್ರಂಥಾಲಯ ಸಂಘ ಬೆಂಬಲ


ಮಂಗಳೂರು: ರಾಜ್ಯದ ವಿವಿಧ ಶೈಕ್ಷಣಿಕ ಸಂಸ್ಥೆಗಳು ಹಾಗೂ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಹಲವು ವರ್ಷಗಳಿಂದ ಖಾಲಿ ಬಿದ್ದಿರುವ ಗ್ರಂಥಪಾಲಕರ ಹುದ್ದೆಗಳನ್ನು ಸರ್ಕಾರ ತಕ್ಷಣವೇ ಭರ್ತಿ ಮಾಡಬೇಕೆಂದು ದಕ್ಷಿಣ ಕನ್ನಡ ಮತ್ತು ಕೊಡಗು ಗ್ರಂಥಾಲಯ ಸಂಘ (ರಿ) ಉಡುಪಿ ಸರ್ಕಾರವನ್ನು ಆಗ್ರಹಿಸಿದೆ.


ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಷಯದಲ್ಲಿ ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಹಾಗೂ ಪಿಎಚ್.ಡಿ.ಯಂತಹ ಉನ್ನತ ಶಿಕ್ಷಣ ಪೂರೈಸಿರುವ ಸಾವಿರಾರು ಅರ್ಹ ಅಭ್ಯರ್ಥಿಗಳು ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಸರ್ಕಾರ ದೀರ್ಘಕಾಲದಿಂದ ನೇಮಕಾತಿ ಪ್ರಕ್ರಿಯೆ ನಡೆಸದೇ ಇರುವುದರಿಂದ ಅನೇಕ ಅಭ್ಯರ್ಥಿಗಳು ವಯೋಮಿತಿ ಮೀರಿ ಉದ್ಯೋಗಾವಕಾಶದಿಂದ ವಂಚಿತರಾಗುವ ಭೀತಿ ಎದುರಿಸುತ್ತಿದ್ದಾರೆ ಎಂದು ಸಂಘ ಕಳವಳ ವ್ಯಕ್ತಪಡಿಸಿದೆ.


ಅಕ್ಟೋಬರ್ 5ರ ಹೋರಾಟಕ್ಕೆ ಬೆಂಬಲ:

ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಂಥಪಾಲಕರ ಸಂಘ ಹಾಗೂ ವಿವಿಧ ಗ್ರಂಥಾಲಯ ಸಂಘಟನೆಗಳ ಒಕ್ಕೂಟವು ಅಕ್ಟೋಬರ್ 5ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ (ಫ್ರೀಡಂ ಪಾರ್ಕ್) ಹಮ್ಮಿಕೊಂಡಿರುವ ಬೃಹತ್ ಹೋರಾಟಕ್ಕೆ ಸಂಘವು ಸಂಪೂರ್ಣ ಬೆಂಬಲ ಸೂಚಿಸಿದೆ.


ಶೈಕ್ಷಣಿಕ ಸಂಸ್ಥೆಗಳ ಶೈಕ್ಷಣಿಕ ಗುಣಮಟ್ಟ ಹಾಗೂ ಸಾರ್ವಜನಿಕ ಗ್ರಂಥಾಲಯಗಳ ಸುಗಮ ನಿರ್ವಹಣೆಗೆ ಗ್ರಂಥಪಾಲಕರ ಪಾತ್ರ ಮುಖ್ಯವಾಗಿದ್ದು, ಸರ್ಕಾರ ವಿಳಂಬ ಮಾಡದೇ ತಕ್ಷಣವೇ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಬೇಕು ಎಂದು ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಜಂಟಿಯಾಗಿ ಒತ್ತಾಯಿಸಿದ್ದಾರೆ.

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top