ಸಂಗೀತದ ಮೂಲಕ ದೈವಿಕ ಆನಂದ ಹೊಂದಲು ಸಾಧ್ಯ: ಸ್ವಾಮಿ ಜಿತಕಾಮನಂದಜಿ

Upayuktha
0

 ರಾಗಾ ಸುಧಾ ಸಂಗೀತ ಸಂಭ್ರಮಕ್ಕೆ ಚಾಲನೆ


ಮಂಗಳೂರು: ಸಂಗೀತದ ಮೂಲಕ ದೈವಿಕ ಆನಂದ ಹೊಂದಲು ಸಾಧ್ಯ, ಸ್ವಾಮಿ ವಿವೇಕಾನಂದರು ಸಂಗೀತದ ಬಗ್ಗೆ ಆಭ್ಯಾಸ ಮಾಡಿದ್ದರು ಮತ್ತು ಪ್ರೇಮಿಯಾಗಿದ್ದರು ಎಂದು ಮಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ತಿಳಿಸಿದ್ದಾರೆ.


ಅವರು ಕಲಾಸಾಧನ ಸಂಸ್ಥೆ ಇದರ ಆಶ್ರಯದಲ್ಲಿ  ರಾಮಕೃಷ್ಣ ಮಿಷನ್ ಸಹಯೋಗದಲ್ಲಿ ರವಿವಾರ ನಗರದ ರಾಮಕೃಷ್ಣ ಮಠದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ 'ರಾಗ ಸುಧಾ'ಕ್ಕೆ ಚಾಲನೆ ನೀಡಿ ಮಾತನಾಡಿದರು.


ಸೃಷ್ಟಿಯ ಆದಿಯಿಂದಲೂ ಸಂಗೀತ ನಮ್ಮ ಜೊತೆಯಾಗಿ ಬಂದಿದೆ.ಸಂಗೀತದ ಮೂಲಕ ದೈಹಿಕ ಮಾನಸಿಕ ಶಾಂತಿ ಹೊಂದಲು ಸಾಧ್ಯ,ರಾಮಕೃಷ್ಣ ಮಠದ ಪ್ರಶಾಂತ ಪರಿಸರದಲ್ಲಿ ಕಲಾಸಾಧನ ತಂಡ ರಾಗ ಸುಧಾ ಸಂಗೀತ ಸಂಭ್ರಮ ನಡೆಸಲು ಆಯ್ಕೆ ಮಾಡಿರುವುದು ಶ್ಲಾಘನೀಯ ಎಂದು ಶುಭ ಹಾರೈಸಿದರು.

ಉದ್ಘಾಟನಾ ಸಮಾರಂಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಅದಾನಿ ಸಮೂಹ ಸಂಸ್ಥೆಗಳ ಕಾರ್ಯ ನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ದ.ಕ ಜಿಲ್ಲಾ ಉಪ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮ ರಡ್ಡಿ, ಖ್ಯಾತ ಹೃದ್ರೋಗ ತಜ್ಞ ಡಾ. ಮೋಹನ್ ಪೈ, ಎಂ ಆರ್ ಪಿ ಎಲ್ ನಿವೃತ್ತ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ,ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಪ್ರಶಾಂತ್ ಪೈ, ಶಕ್ತಿನಗರದ ಶಕ್ತಿ ಕಾಲೇಜು ಆಡಳಿತಾಧಿಕಾರಿ ರಮೇಶ್, ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್, ಮಂಗಳೂರು ರೋಟರಿ ಸೆಂಟ್ರಲ್ ನ ನಿಕಟಪೂರ್ವ ಅಧ್ಯಕ್ಷ ಭಾಸ್ಕರ ರೈ ಕಟ್ಟ, ಉಪಸ್ಥಿತರಿದ್ದರು.ಕಲಾ ಸಾಧನ ಸಂಸ್ಥೆ ನಿರ್ದೇಶಕಿ ವಿಭಾ ಶ್ರೀನಿವಾಸ್ ನಾಯಕ್ ಸ್ವಾಗತಿಸಿದರು. ಪಾಂಡುರಂಗ ಆಚಾರ್ಯ ವಂದಿಸಿದರು. ಶ್ರೀನಿವಾಸ್ ನಾಯಕ್ ಇಂದಾಜೆ ಕಾರ್ಯಕ್ರಮ ನಿರೂಪಿಸಿದರು.ಶ್ರೀಮತಿ ಸ್ಮಿತಾ ಅವರು ಕಲಾವಿದರ ಪರಿಚಯ ಮಾಡಿಕೊಟ್ಟರು.ಇದೇ ವೇಳೆ ಕಲಾವಿದರನ್ನು ಸನ್ಮಾನಿಸಲಾಯಿತು.


ಖ್ಯಾತ ಹಿಂದೂಸ್ತಾನಿ ಗಾಯಕರಾದ ಪುಣೆಯ ಆದಿತ್ಯ ಮೋದಕ್ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು ತಬಲಾದಲ್ಲಿ ಬೆಂಗಳೂರಿನ ಅಕ್ಷಯ್ ಜೋಷಿ, ಹಾರ್ಮೋನಿಯಂ ನಲ್ಲಿ ಯಲ್ಲಾಪುರದ ಸತೀಶ್ ಭಟ್ ಹೆಗ್ಗಾರ್, ತಾನ್ಪುರದಲ್ಲಿ ಮಂಗಳೂರಿನ ಕಾರ್ತಿಕ್ ಹಾಗೂ ಪ್ರದಯ್ ಸಾಥ್ ನೀಡಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top