ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆಯ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸುಧೀರ್ ಕೆ.ವಿ. ಅವರು “A Psychological Counselling Support System Based on Emotional Pattern Recognition” ಎಂಬ ವಿಷಯದಲ್ಲಿ ಭಾರತೀಯ ಪೇಟೆಂಟ್ ಪಡೆದಿದ್ದಾರೆ.
ಭಾವನಾತ್ಮಕ ಮಾದರಿಗಳನ್ನು ಗುರುತಿಸುವ ಮೂಲಕ ವ್ಯಕ್ತಿಯ ಮಾನಸಿಕ ಸ್ಥಿತಿಯನ್ನು ಅರ್ಥೈಸಿ, ಸೂಕ್ತವಾದ ಮನೋವೈಜ್ಞಾನಿಕ ಕೌನ್ಸೆಲಿಂಗ್ ಬೆಂಬಲ ಒದಗಿಸುವ ವ್ಯವಸ್ಥೆಯನ್ನು ಈ ಆವಿಷ್ಕಾರ ಒಳಗೊಂಡಿದೆ. ತಂತ್ರಜ್ಞಾನವನ್ನು ಮನೋವೈಜ್ಞಾನಿಕ ಸಲಹಾ ಕ್ಷೇತ್ರದೊಂದಿಗೆ ಸಂಯೋಜಿಸುವ ಮೂಲಕ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸುವ ಉದ್ದೇಶವನ್ನು ಈ ವ್ಯವಸ್ಥೆ ಹೊಂದಿದೆ.
ಡಾ. ಸುಧೀರ್ ಕೆ.ವಿ. ಅವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಮನೋವಿಜ್ಞಾನ ವಿಭಾಗದ ಸಹೋದ್ಯೋಗಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
