ಉದ್ಯಮಿ ಪಾದೆ ಅಜಿತ್ ರೈ ಅವರಿಗೆ ಎಮಿನೆಂಟ್ ಬಂಟ್ ಪರ್ಸನಾಲಿಟಿ ಪ್ರಶಸ್ತಿ

Upayuktha
0

ಮಂಗಳೂರು: ವಿಶ್ವ ಬಂಟ ಪ್ರತಿಷ್ಠಾನ ಇದರ 30ನೇ ವಾರ್ಷಿಕ ಮಹಾಸಭೆ ಪ್ರತಿಷ್ಠಾನದ ಅಧ್ಯಕ್ಷ ಕುಶಲ್.ಎಸ್.ಹೆಗ್ಡೆ ಅಧ್ಯಕ್ಷತೆಯಲ್ಲಿ ಸೆ.12ರಂದು ಮಧ್ಯಾಹ್ನ 12ಕ್ಕೆ ನಗರದ ಎ.ಜೆ. ಗ್ರ್ಯಾಂಡ್‌ನ ಸಭಾಂಗಣದಲ್ಲಿ ನಡೆಯಲಿದೆ. ಬಳಿಕ ನಡೆಯುವ ಸಮಾರಂಭದಲ್ಲಿ ಯುನೈಟೆಡ್ ರಬ್ಬರ್ ಇಂಡಸ್ಟ್ರೀಸ್ ನ  ಅಧ್ಯಕ್ಷ ಪಾದೆ ಅಜಿತ್ ರೈ ಅವರಿಗೆ ವಿಶ್ವ ಬಂಟ ಪ್ರತಿಷ್ಠಾನದ ಎಮಿನೆಂಟ್ ಬಂಟ್ ಪರ್ಸನಾಲಿಟಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.


ಯಕ್ಷಗಾನ ಕಲಾವಿದ ಸುರೇಶ್ ಶೆಟ್ಟಿ ಶಂಕರನಾರಾಯಣ ಅವರಿಗೆ ಡಾ.ಡಿ.ಕೆ. ಚೌಟ ದತ್ತಿನಿಧಿ ಪ್ರಶಸ್ತಿ, ಸಿಎ ಅಂತಿಮ ಪರೀಕ್ಷೆಯಲ್ಲಿ  47ನೇ ರ‍್ಯಾಂಕ್ ಪಡೆದ ಆದಿತ್ಯ ಪೆರ್ಗಡೆ ಅವರಿಗೆ ದಿ.ಸಿಎ.ವೈ.ಆರ್.ಶೆಟ್ಟಿ ದತ್ತಿನಿಧಿ ಪ್ರಶಸ್ತಿ, ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುನೀತ್ ಶೆಟ್ಟಿ ಅವರಿಗೆ ಸಿಎ ಗೋಪಾಲ್ ಬಿ.ಶೆಟ್ಟಿ ದತ್ತಿನಿಧಿ ಪ್ರಶಸ್ತಿ ಹಾಗೂ ಕೃಷಿ ಕ್ಷೇತ್ರದ ಸಾಧಕಿ ಸಾಧಮ್ಮ ಶೆಟ್ಟಿ ಅವರಿಗೆ ದಿ. ಎಣ್ಮಕಜೆ ಕಲಾವತಿ ಶೆಟ್ಟಿ ದತ್ತಿನಿಧಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದೆಂದು ವಿಶ್ವ ಬಂಟ ಪ್ರತಿಷ್ಠಾನದ ಕಾರ್ಯದರ್ಶಿ ಡಾ.ಬಿ. ಸಚ್ಚಿದಾನಂದ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top