ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ವತಿಯಿಂದ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಮತ್ತು ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಸಹಯೋಗದಲ್ಲಿ ಸೆ.20ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ನಗರದ ಮಣ್ಣಗುಡ್ಡೆ ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ಮತ್ತು ರಕ್ತದಾನ ಶಿಬಿರ ನಡೆಯಲಿದೆ.
ಕೆಎಂಸಿ ಆಸ್ಪತ್ರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮತ್ತು ಶ್ರೀನಿವಾಸ್ ಹಾಸ್ಪಿಟಲ್, ಮುಕ್ಕ ಇಲ್ಲಿನ ತಜ್ಞ ವೈದ್ಯರಿಂದ ಕಿವಿ, ಮೂಗು, ಗಂಟಲು ತಪಾಸಣೆ, ಜನರಲ್ ಮೆಡಿಸಿನ್, ಸಾಮಾನ್ಯ ತಪಾಸಣೆ, ಕಣ್ಣಿನ ತಪಾಸಣೆ ಮತ್ತು ಚಿಕಿತ್ಸೆ ಹಾಗೂ ಕನ್ನಡಕ ವಿತರಣೆ ನಡೆಯಲಿದೆ.
ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಶಿಬಿರ ಉದ್ಘಾಟಿಸಲಿದ್ದಾರೆ. ವಕೀಲ ರಾಮ್‌ಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ರೆಡ್‌ಕ್ರಾಸ್ ಸೊಸೈಟಿಯ ನಿರ್ದೇಶಕ ರಾಘವೇಂದ್ರ ರಾವ್ ರಕ್ತದಾನಕ್ಕೆ ಚಾಲನೆ ನೀಡಲಿದ್ದಾರೆ. ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಣ್ಣಗುಡ್ಡೆ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ, ದ.ಕ. ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ಅಧ್ಯಕ್ಷ ಸತೀಶ್ ಪೂಜಾರಿ ಅಶೋಕನಗರ, ಗೌರವಾಧ್ಯಕ್ಷ ಸುನೀಲ್ ಕುಮಾರ್ ಬಜಾಲ್, ಕೆಎಂಸಿ ಆಸ್ಪತ್ರೆಯ ಡಾ. ಕಿಶನ್ ಪ್ರೇಮ್, ಡಾ. ನಿಖಿಲ್ ಗೋವಿಂದ್ ಶೆಣೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
