ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ "ಗಿಡ ನೆಡಿ" ಕಾರ್ಯಕ್ರಮ

Upayuktha
0


ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಇಕೋ ಕ್ಲಬ್ ನ ಆಶ್ರಯದಲ್ಲಿ ಆ 29 ರಂದು "ಗಿಡ ನೆಡಿ" ಕಾರ್ಯಕ್ರಮವು ಕಾಲೇಜಿನ ಆವರಣದಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಗಿಡ ನೆಡುವ ಮೂಲಕ, ಪ್ರಕೃತಿಯ ಉಪಯೋಗಗಳು ಹಾಗೂ ಅದರ ಮಹತ್ವದ ಕುರಿತು ಅರಿವು ಮೂಡಿಸಿದರು. ಪ್ರಕೃತಿಯನ್ನು ಸಂರಕ್ಷಿಸುವುದು ಹಾಗೂ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವನ್ನು  ತಿಳಿಸಿದರು.


ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ವಿವಿಧ ತಳಿಯ ಗಿಡಗಳನ್ನು ನೆಟ್ಟರು. ಇಕೋ ಕ್ಲಬ್ ನ ಸಂಯೋಜಕರಾದ ಕವಿತಾ ಕೆ, ಹರ್ಷಿತ್ ಕುಮಾರ್, ಇಕೋ ಕ್ಲಬ್ ನ ಪದಾಧಿಕಾರಿಗಳು ಹಾಗೂ ಬೋಧಕ, ಬೋಧಕೇತರ  ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.


ಕಾರ್ಯಕ್ರಮವನ್ನು ರೋಶಿನಿ ಆಂಟೋನೆಟ್ ಫೆರ್ನಾಂಡಿಸ್ ಸ್ವಾಗತಿಸಿ, ನಿರೂಪಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top