ಸರಕಾರಿ ಪದವಿ ಪೂರ್ವ ಕಾಲೇಜು ನಡ: ಜೇಸಿ ವತಿಯಿಂದ ವ್ಯಕ್ತಿತ್ವ ವಿಕಸನ ಮತ್ತು ತರಬೇತಿ ಕಾರ್ಯಕ್ರಮ

Shreya Hegde
0


ಬೆಳ್ತಂಗಡಿ: ತಾಲೂಕಿನ ಉಜಿರೆ (ಸಿಟಿ)ಯ ಜೆಸಿಐ ಸಂಸ್ಥೆಯು ಜೆಸಿ ಸಪ್ತಾಹದ ಅಂಗವಾಗಿ ಸರಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿಯ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಮತ್ತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಜೆಸಿಐ ಉಜಿರೆಯ ಅಧ್ಯಕ್ಷರಾದ ಮಹಮದ್ ಮಿರ್ಷಾದ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಪನ್ಯಾಸಕರು ಹಾಗೂ ಜೆಸಿಐನ ತರಬೇತಿದಾರರೂ ಆಗಿರುವ ಸಂಪತ್ ಕುಮಾರ್ ಇವರು ವ್ಯಕ್ತಿತ್ವ ನಿರ್ಮಾಣ ಮತ್ತು ಚಟುವಟಿಕೆಗಳ ಮೂಲಕ ನಾಯಕತ್ವ ಕೌಶಲ್ಯ ವಿಕಸನಾ ತರಬೇತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯರಾದ ಶ್ರೀಮತಿ ಲಿಲ್ಲಿ ಪಿವಿ ಇವರು ಉಪಸ್ಥಿತರಿದ್ದರು. ಸಹಕರಿಸಿದ ಎಲ್ಲರಿಗೂ JCI  ಉಜಿರೆಯ ಕಾರ್ಯದರ್ಶಿಯಾಗಿರುವ ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್ ವಂದಿಸಿದರು.

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top