ಸುರತ್ಕಲ್: ಗೋವಿಂದ ದಾಸ ಕಾಲೇಜಿನ ಗ್ರಂಥಾಲಯ ವಿಭಾಗವು ಆಂತರಿಕ ಗುಣಮಟ್ಟ ಖಾತರಿ ಕೋಶ (IQAC) ಸಹಯೋಗದಲ್ಲಿ 28 ಅಗಸ್ಟ್ 2026 ರಂದು ಪುಸ್ತಕ ಪ್ರೀತಿ ಪರಿಚಯ ಸರಣಿ ಕಾರ್ಯಕ್ರಮವನ್ನು ಆಯೋಜಿಸಿತು. ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸವನ್ನು ಬೆಳೆಸುವುದು, ಸಾಹಿತ್ಯಾಸಕ್ತಿಯನ್ನು ಹೆಚ್ಚಿಸುವುದು ಹಾಗೂ ಪುಸ್ತಕಗಳ ಕುರಿತು ಚರ್ಚೆ ಮತ್ತು ವಿಮರ್ಶೆಯ ಮೂಲಕ ಬೌದ್ಧಿಕ ಚಿಂತನೆಗೆ ಉತ್ತೇಜನ ನೀಡುವುದು ಕಾರ್ಯಕ್ರಮದ ಉದ್ದೇಶವಾಗಿತ್ತು.
ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿ ಅಜಯ್ ಎಸ್. ಕೆ. ಅವರು ಚಿಕ್ಕೇರೂರು ಧೀರೇಂದ್ರಾಚಾರ್ ಅವರ 'ಜಿಗಿಯುವ ಹುಲಿ – ನೇತಾಜಿ ಸುಭಾಷ್ ಚಂದ್ರ ಬೋಸ್’ ಎಂಬ ಪ್ರಸಿದ್ಧ ಕನ್ನಡ ಕೃತಿಯ ಕುರಿತು ಪರಿಣಾಮಕಾರಿ ಪುಸ್ತಕ ವಿಮರ್ಶೆಯನ್ನು ಮಂಡಿಸಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ, ಆದರ್ಶಗಳು ಹಾಗೂ ದೇಶಕ್ಕಾಗಿ ನೀಡಿದ ಕೊಡುಗೆಗಳನ್ನು ವಿದ್ಯಾರ್ಥಿ ಅಜಯ್ ಅವರು ತಮ್ಮ ವಿಮರ್ಶೆಯಲ್ಲಿ ಸಮರ್ಥವಾಗಿ ಪರಿಚಯಿಸಿದರು. ಅವರ ವಿಚಾರಪೂರ್ಣ ಪ್ರಸ್ತುತಿ ಸಭಿಕರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರೀಶ ಆಚಾರ್ಯ ಪಿ. ಉಪಸ್ಥಿತರಿದ್ದರು. ಬೋಧಕ ಸಿಬ್ಬಂದಿಗಳಾದ ಡಾ. ಶ್ರೀದೇವಿ, ಡಾ. ಪ್ರತೀಕ್ಷಾ,ಪುನೀತ್, ಅಪೇಕ್ಷಾ, ಡಾ. ಸುಧಾ ಯು., ಡಾ. ವಿಜಯಲಕ್ಷ್ಮಿ, ಅಕ್ಷತಾ ಹಾಗೂ ದಯಾ ಸುವರ್ಣ ಮತ್ತು ಗ್ರಂಥಪಾಲಕರಾದ ಡಾ. ಸುಜಾತಾ ಬಿ. ಉಪಸ್ಥಿತರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿ ಕೆವಿನ್ ಅವರು ಸ್ವಾಗತಿಸಿದರು. ಬಳಿಕ ಅವರು ವಂದನಾರ್ಪಣೆಯನ್ನು ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಪ್ರಾಂಶುಪಾಲರು, ಬೋಧಕ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


