ಹಾರಕೂಡ ಮಠದಲ್ಲಿ ಭಾನುವಾರ (ಸೆ 6 ರಂದು) ಪೀಠಾಧಿಪತಿಗಳಾದ ಡಾ. ಚನ್ನವೀರ ಶಿವಾಚಾರ್ಯರ ಸಮ್ಮುಖದಲ್ಲಿ ಪೂರ್ವ ಭಾವಿ ಸಿದ್ಧತೆ ಕುರಿತಾಗಿ ಚರ್ಚಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿ ನವೆಂಬರ್ 21ರಂದು 2026 ಶನಿವಾರ ಬೆಳಿಗ್ಗೆ 11 ಗಂಟೆಗೆ ನವದೆಹಲಿಯ ಜನಪಥ ರಸ್ತೆಯಲ್ಲಿರುವ ಡಾ. ಅಂಬೇಡ್ಕರ್ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ ಹಾರಕೂಡದ ಪೂಜ್ಯ ಶ್ರೀ ಡಾ. ಚನ್ನವೀರ ಶಿವಾಚಾರ್ಯರ 64ನೇ ಜನ್ಮದಿನೋತ್ಸವವನ್ನು ಶ್ರೀಮಠದ ಭಕ್ತರು, ಪೂಜ್ಯರು ಮತ್ತು ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈಭವದೊಂದಿಗೆ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಈಗಾಗಲೇ ರೂಪುರೇಷೆ ಸಿದ್ಧಪಡಿಸಲಾಗಿದೆ.
ರಾಷ್ಟ್ರದ ರಾಜಧಾನಿಯಲ್ಲಿ ಶ್ರೀಗಳೊಬ್ಬರ ಜನ್ಮದಿನಾಚರಣೆ ಆಚರಿಸುತ್ತಿರುವ ಈ ವಿಶೇಷ ಕಾರ್ಯಕ್ರಮವು ಹಾರಕೂಡ ಮಠದ ತ್ರಿವಿಧ ದಾಸೋಹ ಹಾಗೂ ಸಾಮಾಜಿಕ ಸಾಮರಸ್ಯದ ದಿವ್ಯ ಸಂದೇಶ ಬಿತ್ತಲು ಉತ್ತಮ ವೇದಿಕೆಯಾಗಿದೆ. ನವದೆಹಲಿಯಲ್ಲಿ ಆಯೋಜಿಸುವ ಕಾರ್ಯಕ್ರಮಕ್ಕೆ ಪೂಜ್ಯರು ಈಗಾಗಲೇ ಒಪ್ಪಿಗೆ ನೀಡಿದ್ದು ಮಠದ ಅಭಿಮಾನಿಗಳು ಮತ್ತು ಭಕ್ತರ ಜೊತೆ ಚರ್ಚೆಗಾಗಿ ಆಗಮಿಸಿ ಎಲ್ಲ ರೀತಿಯ ಸಲಹೆ ಸೂಚನೆ ಪಡೆದಿರುದಾಗಿ ಡಾ. ಉಮೇಶ್ ಜಾಧವ್ ತಿಳಿಸಿದರು.
ಶ್ರೀಗಳಿಗೆ ಅಧಿಕೃತ ಆಮಂತ್ರಣ
ಹಾರಕೂಡ ಶ್ರೀ ಮಠದಲ್ಲಿ ಪೂಜ್ಯ ಶ್ರೀಗಳಿಗಳನ್ನು ಸತ್ಕರಿಸಿ ಅವರ ಆಶೀರ್ವಾದ ಪಡೆದು ಅಧಿಕೃತ ಆಮಂತ್ರಣ ನೀಡಿ ಗೌರವಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

