ಕಳವಾರು ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ, ಗುರುವಂದನಾ ಕಾರ್ಯಕ್ರಮ

Upayuktha
0

ಚೇಳ್ಯಾರು: ಕಳವಾರು ಶಿಕ್ಷಣ ಸಂಸ್ಥೆ, ಚೇಳ್ಯಾರು ಇಲ್ಲಿ ವಿದ್ಯಾವಿಕಾಸ ಟ್ರಸ್ಟ್, ಶಾಲಾ ಆಡಳಿತ ಸಮಿತಿ, ಎಸ್‌ಡಿಎಮ್‌ಸಿ (SDMC), ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಶಿಕ್ಷಕ-ರಕ್ಷಕ ಸಂಘದ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 5, 2026ರ ಶನಿವಾರದಂದು 'ಶಿಕ್ಷಕರ ದಿನಾಚರಣೆ'ಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.


ಕಾರ್ಯಕ್ರಮದ ಅಂಗವಾಗಿ ಶಾಲೆಯ ಸಮಸ್ತ ಶಿಕ್ಷಕ ವೃಂದದವರನ್ನು ಹಾಗೂ ಶಿಕ್ಷಕೇತರ ಸಿಬ್ಬಂದಿಗಳನ್ನು ಶಾಲು ಹೊದಿಸಿ, ಫಲಪುಷ್ಪ ಹಾಗೂ ಸ್ಮರಣಿಕೆ ನೀಡಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.


ವೇದಿಕೆಯಲ್ಲಿ ವಿದ್ಯಾವಿಕಾಸ ಟ್ರಸ್ಟಿನ ಉಪಾಧ್ಯಕ್ಷರಾದ ರಾಘವ ಸನಿಲ್, ಕಾರ್ಯದರ್ಶಿ ಬಿ. ಲಕ್ಷ್ಮೀಶ ರಾವ್, ಕೋಶಾಧಿಕಾರಿ ಹಾಗೂ ಶಾಲಾ ಸಂಚಾಲಕರಾದ ಬಿ. ರವೀಂದ್ರ ರಾವ್, ಎಸ್‌ಡಿಎಮ್‌ಸಿ ಅಧ್ಯಕ್ಷರಾದ ಬಾಳ ಗಂಗಾಧರ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆರೇಖಾ, ಮತ್ತು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಚೇಳ್ಯಾರು ಉಪಸ್ಥಿತರಿದ್ದು ಶುಭಹಾರೈಸಿದರು.


ಶಾಲಾ ಮುಖ್ಯೋಪಾಧ್ಯಾಯಿನಿ ಶೋಭಾ ಸಿ., ಶಾಲಾ ಶಿಕ್ಷಕ ವೃಂದದವರು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಸಂಪೂರ್ಣ ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿಗಳೇ ಅಚ್ಚುಕಟ್ಟಾಗಿ ನಡೆಸಿಕೊಟ್ಟಿದ್ದು ವಿಶೇಷವಾಗಿತ್ತು. ಮಾಸ್ಟರ್ ಸುಮೇಧ ಕೃಷ್ಣ ಕಾರಂತ್ ಸ್ವಾಗತಿಸಿದರು. ಕುಮಾರಿ ಭುವಿ ಕೆ.ವಿ. ಕಾರ್ಯಕ್ರಮ ನಿರೂಪಿಸಿದರೆ, ಕುಮಾರಿ ಹರ್ಷಿಕಾ ವಂದನಾರ್ಪಣೆ ಮಾಡಿದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top