ಕಲ್ಲಡ್ಕ: ಶ್ರೀರಾಮ ಪದವಿಪೂರ್ವ ಕಾಲೇಜಿನಲ್ಲಿ ನಾಳೆ 'ವಿದ್ಯಾರ್ಥಿ ಕಾವ್ಯ ವಿಹಾರ' ಕಾರ್ಯಕ್ರಮ

Shreya Hegde
0


ಕಲ್ಲಡ್ಕ: ಅಖಿಲ ಭಾರತೀಯ ಸಾಹಿತ್ಯ ಪರಿಷತ್ (ರಿ.), ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ಬಂಟ್ವಾಳ ತಾಲೂಕು ಸಮಿತಿ ಮತ್ತು ಪ್ರತಿಭಾ ರಾಮು ಸಾಹಿತ್ಯ ಸಂಘ ಹಾಗೂ ಶ್ರೀರಾಮು ಪದವಿಪೂರ್ವ ಕಾಲೇಜು, ಕಲ್ಲಡ್ಕ ಇವರ ಸಹಯೋಗದೊಂದಿಗೆ ಸೆಪ್ಟೆಂಬರ್ 22, 2026 ರ ಮಂಗಳವಾರದಂದು ಮಧ್ಯಾಹ್ನ 2.00 ಗಂಟೆಗೆ ಕಾಲೇಜಿನ ಅಜಿತ್ ಕುಮಾರ್ ಸಭಾಭವನದಲ್ಲಿ 'ವಿದ್ಯಾರ್ಥಿ ಕಾವ್ಯ ವಿಹಾರ' ಕಾರ್ಯಕ್ರಮವು ಜರುಗಲಿದೆ.


ಈ ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ವೀಣಾ ಟಿ. ಶೆಟ್ಟಿ ನೆರವೇರಿಸಲಿದ್ದಾರೆ. ಶ್ರೀರಾಮ ಪದವಿಪೂರ್ವ ಕಾಲೇಜಿನ ಪ್ರಾಾಂಶುಪಾಲರಾದ ಶ್ರೀ ವಸಂತ ಬಲ್ಲಾಳ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀರಾಮ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ಯತಿರಾಜ್ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕಿನ ಸಹಕಾರ್ಯದರ್ಶಿ ಅಶೋಕ್ ಕಡೆಶಿವಾಲಯ ಅವರು ಭಾಗವಹಿಸಲಿದ್ದಾರೆ.


ಉದ್ಘಾಟನಾ ಸಮಾರಂಭದ ಬಳಿಕ 'ವಿದ್ಯಾರ್ಥಿ ಕವಿಗೋಷ್ಠಿ' ನಡೆಯಲಿದ್ದು, ಹಿರಿಯ ಸಾಹಿತಿ ಮತ್ತು ನಿವೃತ್ತ ಅಧ್ಯಾಪಕರಾದ ವಿ.ಬಿ ಕುಳಮರ್ವ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕವಿಗೋಷ್ಠಿಯಲ್ಲಿ ಶ್ರೀ ರಾಮ ವಿದ್ಯಾಕೇಂದ್ರದ ಆಯ್ಕೆಮಾಡಿದ ವಿದ್ಯಾರ್ಥಿಗಳಿಂದ ಕವನ ವಾಚನ ಜರುಗಲಿದೆ.


ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಡಳಿತ ಮಂಡಳಿ, ಬೋಧಕ ಹಾಗೂ ಬೋಧಕೇತರ ವೃಂದ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ಬಂಟ್ವಾಳ ತಾಲೂಕು ಸಮಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಪ್ರೀತಿಯ ಸ್ವಾಗತ ಕೋರಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top