ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕಕ್ಕೆ "ಉತ್ತಮ ಘಟಕ" ಪ್ರಶಸ್ತಿಯ ಗರಿ

Upayuktha
0


​ಶಿವಮೊಗ್ಗ : ವಿದ್ಯಾರ್ಥಿಗಳಲ್ಲಿ ರಕ್ತದಿಂದ ಮತ್ತು ಇತರ ಮೂಲಗಳಿಂದ ಹರಡಬಹುದಾದ ಮಾರಕ ರೋಗಗಳ ಕುರಿತು ನಿರಂತರವಾಗಿ ಹತ್ತು - ಹಲವು ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಾ, ಜಾಗೃತಿ ಮೂಡಿಸುತ್ತಾ ಬಂದಿರುವ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ಕುವೆಂಪು ವಿಶ್ವವಿದ್ಯಾಲಯ ಮತ್ತು ಯುವ ರೆಡ್ ಕ್ರಾಸ್ ಘಟಕವು 2025 - 26 ನೇ ಸಾಲಿನ "ಉತ್ತಮ ಘಟಕ ಪ್ರಶಸ್ತಿ" ಗೆ ಕಾಲೇಜನ್ನು ಆಯ್ಕೆ ಮಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದೆ.


​ಈ ಪ್ರತಿಷ್ಠಿತ ಪ್ರಶಸ್ತಿಯು ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿಗಳಾದ ಶ್ರೀ ಯುತ ಮಂಜುನಾಥ್ ಸ್ವಾಮಿಯವರ ನಿರಂತರ ಪರಿಶ್ರಮ ಮತ್ತು ವಿದ್ಯಾರ್ಥಿ ಸ್ವಯಂಸೇವಕರ ಸಾಮೂಹಿಕ ಶ್ರಮಕ್ಕೆ ಸಂದ ಗೌರವವಾಗಿದೆ ಎಂದು‌ ಮಾನಸ ಟ್ರಸ್ಟ್, ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಶ್ಲಾಘಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top