ಮಡಗಾಂವ್‌- ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ ಬೆಂಗಳೂರಿಗೆ ವಿಸ್ತರಣೆ: ಅಶ್ವಿನಿ ವೈಷ್ಣವ್

Shreya Hegde
0

ಶೀಘ್ರ ಪರಿಷ್ಕೃತ ವೇಳಾಪಟ್ಟಿ ಘೋಷಣೆ | ಸಂಸದ ಕ್ಯಾ. ಬ್ರಿಜೇಶ್ ಚೌಟರ ಕೋರಿಕೆಗೆ ರೈಲ್ವೇ ಸಚಿವರ ಸ್ಪಂದನೆ


‌

ಬೆಂಗಳೂರು/ಮಂಗಳೂರು: ಮಂಗಳೂರು ಮತ್ತು ಬೆಂಗಳೂರು ನಡುವೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಆರಂಭಿಸುವಂತೆ ಕೋರಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೀಡಿದ್ದ ಮನವಿಗೆ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಮಡಗಾಂವ್- ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಈಗ ಬೆಂಗಳೂರು ವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಪತ್ರದ ಮೂಲಕ ಅಧಿಕೃತವಾಗಿ ತಿಳಿಸಿದ್ದಾರೆ.


ಸುಬ್ರಹ್ಮಣ್ಯ ರಸ್ತೆ ಮತ್ತು ಕಬಕ ಪುತ್ತೂರು ಮೂಲಕ ಸಂಚಾರ:

ಈ ಹಿಂದೆ ಮಡಗಾಂವ್ ಮತ್ತು ಮಂಗಳೂರು ನಡುವೆ ಮಾತ್ರ ಸಂಚರಿಸುತ್ತಿದ್ದ ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು, ಇನ್ನು ಮುಂದೆ ಸುಬ್ರಹ್ಮಣ್ಯ ರಸ್ತೆ ಮತ್ತು ಕಬಕ ಪುತ್ತೂರು ಮಾರ್ಗವಾಗಿ ಬೆಂಗಳೂರಿನ ಯಶವಂತಪುರ ವರೆಗೂ ವಿಸ್ತರಣೆಗೊಂಡು ಸಂಚರಿಸಲಿದೆ.


ಹೊಸ ರೈಲು ಸಂಖ್ಯೆ ಮತ್ತು ಸಮಯ:

ಮಾರ್ಗ ವಿಸ್ತರಣೆ ಹಾಗೂ ಹೊಸ ವೇಳಾಪಟ್ಟಿಯೊಂದಿಗೆ ಈ ರೈಲು ಇನ್ನು ಮುಂದೆ ರೈಲು ಸಂಖ್ಯೆ: 26655/26656 (ಯಶವಂತಪುರ - ಮಂಗಳೂರು- ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್) ಹೆಸರಿನಲ್ಲಿ ಪರಿಷ್ಕೃತ ವೇಳಾಪಟ್ಟಿಯೊಂದಿಗೆ ಕಾರ್ಯಾಚರಣೆ ನಡೆಸಲಿದೆ. ಕರಾವಳಿಯಿಂದ ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಈ ಬಹುನಿರೀಕ್ಷಿತ ವಂದೇ ಭಾರತ್ ರೈಲು ವಿಸ್ತರಣೆಯಿಂದ ಈ ಭಾಗದ ಪ್ರಯಾಣಿಕರಿಗೆ, ವ್ಯಾಪಾರಸ್ಥರಿಗೆ ಹಾಗೂ ಪ್ರವಾಸಿಗರಿಗೆ ಅತ್ಯಂತ ವೇಗದ ಮತ್ತು ಆರಾಮದಾಯಕ ಪ್ರಯಾಣದ ಅನುಕೂಲ ದೊರೆಯಲಿದೆ.

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top