ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆ: ಸಿಎಂ-ಡಿಸಿಎಂ ಭೇಟಿಯಾದ ಜಿಲ್ಲೆಯ ಶಾಸಕರ ನಿಯೋಗ

Upayuktha
0



ಮಂಗಳೂರು: ಸೆಪ್ಟೆಂಬರ್ 18 ರಂದು ಕರಾವಳಿ ನಗರಿ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ದೀರ್ಘಕಾಲದ ವಿವಿಧ ಬೇಡಿಕೆಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಲು ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗವು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.


ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಮುಂಬರುವ ಸಂಪುಟ ಸಭೆಯಲ್ಲಿ ಸೂಕ್ತ ಪರಿಹಾರ ಹಾಗೂ ಅನುದಾನ ಕಲ್ಪಿಸುವಂತೆ ಒತ್ತಾಯಿಸಿ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರು ಸೇರಿದಂತೆ ದಕ್ಷಿಣ ಕನ್ನಡದ ಜನಪ್ರತಿನಿಧಿಗಳ ತಂಡ ಸುದೀರ್ಘ ಚರ್ಚೆ ನಡೆಸಿತು. ಜಿಲ್ಲೆಯ ಮೂಲಸೌಕರ್ಯ, ಹೆದ್ದಾರಿ ಅಭಿವೃದ್ಧಿ, ಪ್ರವಾಸೋದ್ಯಮ, ಹಾಗೂ ಕರಾವಳಿ ಭಾಗದ ಪ್ರಮುಖ ಯೋಜನೆಗಳಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಬೇಕೆಂದು ನಿಯೋಗವು ಸರ್ಕಾರವನ್ನು ಆಗ್ರಹಿಸಿತು.


ಈ ಪ್ರಮುಖ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜ, ವೇದವ್ಯಾಸ್ ಕಾಮತ್, ಕಿಶೋರ್ ಕುಮಾರ್ ಪುತ್ತೂರು, ಹಾಗೂ ಭಾಗೀರಥಿ ಮುರುಳ್ಯ ಉಪಸ್ಥಿತರಿದ್ದರು.


ಇದೇ ಸಂದರ್ಭದಲ್ಲಿ ಜಿಲ್ಲೆಯ ಇತರ ಶಾಸಕರಾದ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಹಾಗೂ ಮಂಜುನಾಥ್ ಭಂಡಾರಿ ಅವರು ಸಭೆಯಲ್ಲಿದ್ದು, ಪಕ್ಷಾತೀತವಾಗಿ ಜಿಲ್ಲೆಯ ಹಿತದೃಷ್ಟಿಯಿಂದ ಅಗತ್ಯವಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಉಪಮುಖ್ಯಮಂತ್ರಿಗಳ ಗಮನ ಸೆಳೆದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top