ಮಂಗಳೂರಿನಲ್ಲಿ ಇಂದು ‘ರಾಷ್ಟ್ರಕವಿ ಜಿ. ಎಸ್. ಶಿವರುದ್ರಪ್ಪ ನೂರರ ನೆನಪು’ ಕಾರ್ಯಕ್ರಮ

Shreya Hegde
0


ಮಂಗಳೂರು: ಮಂಗಳೂರಿನ ಕೆನರಾ ಕಾಲೇಜು (ಸ್ವಾಯತ್ತ) ಕನ್ನಡ ವಿಭಾಗ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಇಂದು ‘ರಾಷ್ಟ್ರಕವಿ ಜಿ. ಎಸ್. ಶಿವರುದ್ರಪ್ಪ ನೂರರ ನೆನಪು’ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಸಭೆಯು ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಇಂದು (ಸೆಪ್ಟೆಂಬರ್ 17, ಗುರುವಾರ) ಅಪರಾಹ್ನ 2:30ಕ್ಕೆ ಆರಂಭವಾಗಲಿದೆ.


ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಕೆನರಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರೇಮಲತಾ ವಿ. ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಂಗಳೂರಿನ ಬಿ ಜಿ ಎಸ್‌ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಬ್ರಹ್ಮಣ್ಯ ಸಿ. ಕುಂದೂರು ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕಾಲೇಜಿನ ಆಡಳಿತಾಧಿಕಾರಿ ಡಾ. ದೀಪ್ತಿ ನಾಯಕ್ ಹಾಗೂ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ  ಪುಷ್ಪರಾಜ ಕೆ. ಅವರು ಉಪಸ್ಥಿತರಿರಲಿದ್ದಾರೆ.


ಕೆನರಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ವಾಣಿ ಯು. ಎಸ್. ಸ್ವಾಗತ ಭಾಷಣ ಮಾಡಲಿದ್ದು, ಸಹಾಯಕ ಪ್ರಾಧ್ಯಾಪಕರಾದ  ಪ್ರದೀಪ ಬಿ. ಧನ್ಯವಾದ ಸಮರ್ಪಿಸಲಿದ್ದಾರೆ. ಶ್ರಾವ್ಯ ಅಂಚನ್ ಅವರು ಇಡೀ ಕಾರ್ಯಕ್ರಮದ ನಿರೂಪಣೆ ನಡೆಸಿಕೊಡಲಿದ್ದಾರೆ. ಕೆನರಾ ಕಾಲೇಜಿನ ಆಡಳಿತ ಮಂಡಳಿ, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಸಾಹಿತ್ಯಾಸಕ್ತರಿಗೆ ಆದರದ ಆಹ್ವಾನ ನೀಡಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top