ಮಾತೃತ್ವ ಭಾವವನ್ನು ಹೊಂದಿರುವ ದೇಶ ನಮ್ಮ ಭಾರತ - ಗಣರಾಜ ಕುಂಬ್ಳೆ

Upayuktha
0

ಪುತ್ತೂರು: ಜಗತ್ತಿನಲ್ಲಿ ಒಂದು ಹೊಸ ಸಂಚಲನ ಮೂಡಿಸಿದ ವಿಷಯವೇ ಚಿಕಾಗೋ ಭಾಷಣ. ಮಾತೃತ್ವ ಭಾವವನ್ನು ಹೊಂದಿರುವ ದೇಶ ನಮ್ಮ ಭಾರತ ಎನ್ನುವ ವಿಚಾರವನ್ನು ತಿಳಿಸಿದವರು ವಿವೇಕಾನಂದರು. ತಮ್ಮ ಚಿಂತನೆಯ ಮೂಲಕ ಆಧ್ಯಾತ್ಮಿಕ ಸತ್ವವನ್ನು ಭಾರತದೆಲ್ಲೆಡೆ ಪಸರಿಸುವಂತೆ ಮಾಡಿದರು. ಅದರೊಂದಿಗೆ ಭಾರತೀಯರು ಅಪಾರವಾದ ಸತ್ಕಾರ, ಸಹನೆ, ತಾತ್ವಿಕತೆಯನ್ನು ಮೈಗೂಡಿಸಿಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳು ಗುರುವಿನ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಮತ್ತು ನಾವು ತಾತ್ವಿಕವಾಗಿ ಬಲವಾಗಿರಬೇಕು ಎಂದು ರಾಮಕುಂಜದ ನಿವೃತ್ತ ಪ್ರಾಂಶುಪಾಲ ಗಣರಾಜ ಕುಂಬ್ಳೆ ಹೇಳಿದರು.


ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು, ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ತೆಂಕಿಲ ನರೇಂದ್ರ ಪದವಿ ಪೂರ್ವ ಕಾಲೇಜುನಲ್ಲಿ ನಡೆದ ವಿವೇಕ ಸ್ಕೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತೆಂಕಿಲ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶಾನಭಾಗ್ ಮಾತನಾಡುತ್ತಾ, ವಿವೇಕಾನಂದರ ಜೀವನ ಶೈಲಿಯನ್ನು ವಿದ್ಯಾರ್ಥಿಗಳೆಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಭವಿಷ್ಯದಲ್ಲಿ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಶುಭ ಹಾರೈಸಿದರು.


ವೇದಿಕೆಯಲ್ಲಿ ವಿವೇಕಾನಂದ ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ. ವಿಜಯ ಸರಸ್ವತಿ ಬಿ, ತೆಂಕಿಲ ನರೇಂದ್ರ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿ ಸೌಮ್ಯ ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿದ್ಯಾ ಎಸ್  ಸ್ವಾಗತಿಸಿ,  ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಭವ್ಯಶ್ರೀ ವಂದಿಸಿ, ವಿವೇಕಾನಂದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕೌಸಲ್ಯ ನಿರೂಪಿಸಿದರು.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top