ಮುಜುಂಗಾವು: ಶ್ರೀ ಭಾರತಿ ವಿದ್ಯಾಪೀಠ ಮುಜುಂಗಾವಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಭಕ್ತಿ, ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಶ್ರೀಕೃಷ್ಣನ ಜನ್ಮದಿನವನ್ನು ಸ್ಮರಿಸುವ ಈ ಪವಿತ್ರ ಸಂದರ್ಭದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಉದಯ ಕುಮಾರ್ ಮಾಯಿಪ್ಪಾಡಿ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಂಬಾರು ಶ್ರೀದುರ್ಗಾ ಪರಮೇಶ್ವರಿ ದೇವಾಲಯದ ಆಡಳಿತ ಮೊಕ್ತೇಸರರಾದ ರವಿಶಂಕರ ಭಟ್ ಎಡಕ್ಕಾನ , ಅವರು ಆಗಮಿಸಿ ವಿದ್ಯಾರ್ಥಿಗಳಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳನ್ನು ತಿಳಿಸಿದರು. ಹಿರಿಯ ಅಧ್ಯಾಪಕರಾದ ಬಾಲಕೃಷ್ಣ ಶರ್ಮರವರು ಶ್ರೀಕೃಷ್ಣನ ಜೀವನ, ಆತನ ಆದರ್ಶಗಳು ಹಾಗೂ ಭಗವದ್ಗೀತೆಯ ಸಂದೇಶಗಳ ಕುರಿತು ಮಾತನಾಡಿ, ವಿದ್ಯಾರ್ಥಿಗಳಿಗೆ ಸತ್ಯ, ಧರ್ಮ, ಪ್ರೀತಿ ಮತ್ತು ಕರ್ತವ್ಯನಿಷ್ಠೆಯಿಂದ ಜೀವನ ನಡೆಸುವಂತೆ ಪ್ರೇರೇಪಿಸಿದರು.
ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಪುಟಾಣಿ ಮಕ್ಕಳು ರಾಧಾ-ಕೃಷ್ಣರ ವೇಷಭೂಷಣವನ್ನು ಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅವರ ಸುಂದರ ವೇಷಭೂಷಣ, ಮುಗ್ಧ ನಗು ಹಾಗೂ ಉತ್ಸಾಹಭರಿತ ಭಾಗವಹಿಸುವಿಕೆ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದಿತು. ಪುಟಾಣಿ ಮಕ್ಕಳು ಕೃಷ್ಣ ವೇಷದಲ್ಲಿ ಎಲ್ಲರ ಗಮನ ಸೆಳೆದರು.
ಶಾಲಾ ಆಡಳಿತ ಸಮಿತಿಯ ಕಾರ್ಯದರ್ಶಿಗಳಾದ ಶ್ರೀ ಎಚ್.ಎಸ್ ಪ್ರಸಾದ್, ಮಾತೃ ಸಮಿತಿಯ ಅಧ್ಯಕ್ಷೆ ಶ್ರೀಮತಿ ದೀಪ ದೊಡ್ಡಮಾಣಿ , ಆಡಳಿತ ಸಮಿತಿಯ ಸದಸ್ಯರಾದ ಶ್ರೀ ಶ್ಯಾಮರಾಜ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಶ್ಯಾಮ್ ಭಟ್ ದರ್ಬೆಮಾರ್ಗ, ಸಹಮುಖ್ಯ ಶಿಕ್ಷಕಿಯಾದ ಶ್ರೀಮತಿ ಚಿತ್ರಾ ಸರಸ್ವತಿ ಹಾಗೂ ಶಿಕ್ಷಕರು , ರಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.
ಅಧ್ಯಾಪಿಕೆಯರಾದ ಭವ್ಯ ಸ್ವಾಗತಿಸಿ, ಸ್ವಾತಿ ವಂದಿಸಿದರು. ದೇವಿಕಾ ಕಾರ್ಯಕ್ರಮನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

