ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Upayuktha
0

 


ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಭಾರತೀಯ ಹಾಕಿ ಕ್ರೀಡೆಯ ದಂತಕಥೆ, ‘ಹಾಕಿ ಮಾಂತ್ರಿಕ’ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನದ ಸ್ಮರಣಾರ್ಥ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಸೋಮವಾರ ಆಚರಿಸಲಾಯಿತು.


ಪೀಳಿಗೆಗಳಿಗೆ ಸ್ಫೂರ್ತಿಯಾಗಿ, ದೇಶಕ್ಕೆ ಕೀರ್ತಿ ತಂದ ಮೇಜರ್ ಧ್ಯಾನ್ ಚಂದ್ ಅವರ ಕ್ರೀಡಾ ಸಾಧನೆಗಳು ಯುವಜನತೆಗೆ ಸದಾ ಪ್ರೇರಣೆಯಾಗಬೇಕು ಎಂಬುದನ್ನು ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು.


ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ನೌಕಾ ಘಟಕದ ಸಬ್ ಲೆಫ್ಟಿನೆಂಟ್ ತೇಜಸ್ವಿ ಭಟ್ ಅವರು ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಮಾತನಾಡಿ, ಮೇಜರ್ ಧ್ಯಾನ್ ಚಂದ್ ಅವರ ಜೀವನ ಮತ್ತು ಸಾಧನೆಗಳು ಯುವಜನರಿಗೆ ಸ್ಫೂರ್ತಿಯಾಗಬೇಕು . ಕ್ರೀಡಾಪಟುಗಳು ಆರೋಗ್ಯಕರ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳುವ ಅಗತ್ಯ,ಕ್ರೀಡೆಯಲ್ಲಿ ಉಂಟಾಗಬಹುದಾದ ಗಾಯಗಳ ಕುರಿತು ಅರಿವು ಹೊಂದುವುದರ ಜೊತೆಗೆ, ಯಶಸ್ವಿ ಕ್ರೀಡಾ ಬದುಕಿಗೆ ಸೂಕ್ತವಾದ ಪುನರ್ವಸತಿ ಚಿಕಿತ್ಸೆಯ ಮಹತ್ವವನ್ನೂ ವಿವರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ ಅವರು ಜೀವನದಲ್ಲಿ ಶಿಸ್ತಿನ ಮಹತ್ವವನ್ನು ವಿವರಿಸಿ, ವೈಯಕ್ತಿಕ ಹಾಗೂ ವೃತ್ತಿಪರ ಬದುಕನ್ನು ರೂಪಿಸುವಲ್ಲಿ ಶಿಸ್ತು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯ್ ಕುಮಾರ್ ಮೊಳಿಯಾರ್, ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಭಾರತಿ ಎಸ್. ರೈ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಧನ್ಯ ಪಿ.ಟಿ. ಉಪಸ್ಥಿತರಿದ್ದರು.


ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಹರ್ಷಿತಾ ಹಾಗೂ ರಾಜೇಶ್ ಮೂಲ್ಯ ಕಾರ್ಯಕ್ರಮದ ಸಂಯೋಜನೆ ನಡೆಸಿದರು.


ಕ್ರೀಡಾ ಪ್ರತಿಜ್ಞೆಯನ್ನು ಕೃತಿ ಅವರು ಬೋಧಿಸಿದರು. ಅರ್ಚನಾ ಅವರು ಸ್ವಾಗತಿಸಿದರು. ಪ್ರೇಕ್ಷಾ ಅವರು ವಂದನಾರ್ಪಣೆ ನೆರವೇರಿಸಿದರು. ಪೃಥ್ವಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. 



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top