ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭ ಅಕ್ಟೋಬರ್ 1ರಂದು ಬೆಳಗ್ಗೆ 10 ಗಂಟೆಗೆ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಭಾರತೀಯ ರೆಡ್ ಕ್ರಾಸ್‌ನ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಅಧ್ಯಕ್ಷ ಸಿ. ಎ. ಶಾಂತಾರಾಮ್ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯವಂತ ನಾಯಕ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿದ್ಯಾರ್ಥಿ ಪರಿಷತ್ತಿನ ಉಪ ನಿರ್ದೇಶಕ ಪ್ರೊ. ರಾಮಕೃಷ್ಣ ಬಿ.ಎಂ. ಸೇರಿದಂತೆ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
