ಸಂತ ಫಿಲೋಮಿನಾ ಕಾಲೇಜನಲ್ಲಿ ಫಿಲೋ- ನೆಕ್ಸಾ 2026: ವಿಜ್ಞಾನ ಮತ್ತು ಪ್ರತಿಭೆಯ ಅನಾವರಣ

Upayuktha
0

 


ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿಜ್ಞಾನ ವೇದಿಕೆ ಆಯೋಜಿಸಿದ್ದ ಫಿಲೋ-ನೆಕ್ಸಾ 2026 ವಿಜ್ಞಾನೋತ್ಸವವು ವಿವಿಧ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳ ಉತ್ಸಾಹಭರಿತ ಭಾಗವಹಿಸುವಿಕೆಯೊಂದಿಗೆ ನಡೆಯಿತು. ವಿದ್ಯಾರ್ಥಿಗಳು ತಮ್ಮ ವೈಜ್ಞಾನಿಕ ಜ್ಞಾನ, ಸೃಜನಶೀಲತೆ, ಸಂವಹನ ಕೌಶಲ ಹಾಗೂ ತಂಡದ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿದರು.


ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಗುರುತಿಸಿಕೊಂಡು ಲಭಿಸುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆಯತ್ತ ಮುನ್ನಡೆಯಬೇಕು. ದೃಢಸಂಕಲ್ಪ, ಶಿಸ್ತು, ಸತತ ಪ್ರಯತ್ನ ಹಾಗೂ ಪರಿಶ್ರಮ ಯಶಸ್ಸಿನ ಮೂಲವಾಗಿದ್ದು, ವೈಫಲ್ಯಕ್ಕೆ ಹೆದರಬಾರದು ಎಂದರು.


ವಿಜಯ ಕಾಲೇಜು, ಮುಲ್ಕಿಯ ನಿವೃತ್ತ ಪ್ರಾಂಶುಪಾಲ ಡಾ. ನಾರಾಯಣ ಪೂಜಾರಿ ಮುಖ್ಯ ಅತಿಥಿಯಾಗಿ ಮಾತನಾಡಿ, ಶಿಸ್ತು, ತಂಡದ ಮನೋಭಾವ ಹಾಗೂ ದೃಢಸಂಕಲ್ಪದೊಂದಿಗೆ ಶ್ರೇಷ್ಠತೆ ಸಾಧಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.


ಮಾನಸ ಮತ್ತು ತಂಡ ಪ್ರಾರ್ಥಿಸಿ, ಡಾ. ಎಡ್ವಿನ್ ಡಿಸೋಜಾ ಸ್ವಾಗತಿಸಿ, ಪ್ರೊ. ಚಂದ್ರಶೇಖರ್ ಮುಖ್ಯ ಅತಿಥಿಯನ್ನು ಪರಿಚಯಿಸಿ, ಶ್ರೀರಕ್ಷಾ ಬಿ.ವಿ. ವಂದಿಸಿ, ನಿಶ್ಮಿತಾ ರೈ ನಿರೂಪಿಸಿದರು..


ಸಂಜೆ ಎಸ್‌ಜೆಎಂ ಸಭಾಂಗಣದಲ್ಲಿ ನಡೆದ ಸಮಾರೋಪದಲ್ಲಿ ಉಪಪ್ರಾಂಶುಪಾಲ ಡಾ. ವಿಜಯ್ ಕುಮಾರ್  ಮೊಳೆಯಾರ್ ಮಾತನಾಡಿದರು. ವಿದ್ಯಾರ್ಥಿಗಳು ಅನಿಸಿಕೆ ಹಂಚಿಕೊಂಡರು. ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ಸಮಗ್ರ ಚಾಂಪಿಯನ್‌ಶಿಪ್‌ ಗೆದ್ದರೆ, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ರನ್ನರ್‌ಅಪ್ ಆಯಿತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top