ಪುತ್ತೂರಿನ ಸುಪ್ರಜಾ ರಾವ್ ಇವರಿಗೆ 'ಮಂದಾರ' ರಾಜ್ಯ ಪ್ರಶಸ್ತಿ

Upayuktha
0


ಪುತ್ತೂರು: ಶ್ರೀ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ, ಬೆಂಗಳೂರು ಇದರ ರಜತ ಮಹೋತ್ಸವದ ಅಂಗವಾಗಿ ನಡೆದ ಕನ್ನಡ ಕಲಾ ಪ್ರತಿಭೋತ್ಸವ ಸಮಾರಂಭದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಇವರಿಗೆ ಪ್ರೌಢ ಶಿಕ್ಷಣ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ "ಮಂದಾರ" ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. 


ಇವರು ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗವನ್ನು ಮಾಡುತ್ತಿದ್ದು, ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಪ್ರಶಾಂತ್ ರಾವ್ ಹಾಗೂ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿರುತ್ತಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top