ರಾಜ್ಯ ಮಟ್ಟದ ವಾಲಿಬಾಲ್ ಸ್ಪರ್ಧೆ: ಶಕ್ತಿ ಪಿಯು ಕಾಲೇಜಿನ ವಿದ್ಯಾರ್ಥಿ ಸಮರ್ಥ್ ಶೆಟ್ಟಿಗೆ ಚಿನ್ನದ ಪದಕ

Upayuktha
0

ಮಂಗಳೂರು: ವಿದ್ಯಾಭಾರತಿ ಕರ್ನಾಟಕದ ವತಿಯಿಂದ ಬೀದರ್‍ ನಲ್ಲಿಆಯೋಜಿಸಲಾಗಿದ್ದ ರಾಜ್ಯ ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಶಕ್ತಿ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಮರ್ಥ್ ಶೆಟ್ಟಿ ಅತ್ಯುತ್ತಮ ಪ್ರದರ್ಶನ ನೀಡಿ ಚಿನ್ನದ ಪದಕವನ್ನುಗೆದ್ದಿದ್ದಾರೆ.


ಈ ಸಾಧನೆಯೊಂದಿಗೆ ಸಮರ್ಥ್ ಶೆಟ್ಟಿಅವರು ಮುಂದಿನ ತಿಂಗಳು ತೆಲಂಗಾಣದಲ್ಲಿ ನಡೆಯಲಿರುವ ಕ್ಷೇತ್ರೀಯ ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದಿದ್ದಾರೆ.


ವಿದ್ಯಾರ್ಥಿಯ ಈ ಸಾಧನೆಗೆ ಶಕ್ತಿ ವಿದ್ಯಾ ಸಂಸ್ಥೆಯ ಸಂಸ್ಥಾಪಕರಾದಡಾ. ಕೆ.ಸಿ. ನಾೈಕ್, ಕಾರ್ಯದರ್ಶಿಗಳಾದ ಸಂಜಿತ್‍ನಾೈಕ್, ಪ್ರಧಾನ ಸಲಹೆಗಾರರಾದ ರಮೇಶ್ ಕೆ. ಶಕ್ತಿ ಪಿಯು ಕಾಲೇಜಿನ ಪ್ರಾಂಶುಪಾಲರಾದ ಪ್ರದೀಪ್‍ಕುಮಾರ್ ಶೆಟ್ಟಿ ಹಾಗೂ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ಸುರೇಖಾ ಆರ್. ಭಟ್ ಅಭಿನಂದಿಸಿದ್ದಾರೆ. ಅಲ್ಲದೆ, ಮುಂದಿನ ಕ್ಷೇತ್ರೀಯ ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top