ಎಸ್‌ಸಿಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

Upayuktha
0

ಮಂಗಳೂರು: ಇಲ್ಲಿನ ಎಸ್‌ಸಿಎಸ್ ಪ್ರಥಮ ದರ್ಜೆ ಕಾಲೇಜಿನ ಭಾಷಾ ವಿಭಾಗಗಳ ವತಿಯಿಂದ ಸೆಪ್ಟೆಂಬರ್ 8, 2026ರಂದು ಕಾಲೇಜಿನ ಉಪನ್ಯಾಸ ಕೊಠಡಿ-03ರಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಸಾಕ್ಷರತೆ, ಭಾಷೆ, ಸಂಸ್ಕೃತಿ, ಮಾನವೀಯತೆ ಹಾಗೂ ಶಿಕ್ಷಣದ ಮಹತ್ವವನ್ನು ಸಾರುವ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿಯನ್ನು ಮೂಡಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು.


ಸಂಸ್ಥೆಯ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಮಧುಮತಿ ಜೆ. ರಾಜಾ ಪ್ರಸ್ತಾವಿಕವಾಗಿ ಮಾತನಾಡಿ, "ಸಾಕ್ಷರತೆ ಎಂದರೆ ಕೇವಲ ಓದು-ಬರಹಕ್ಕೆ ಸೀಮಿತವಲ್ಲ. ಅದು ವ್ಯಕ್ತಿಯ ಚಿಂತನೆ, ಮಾನವೀಯತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಶಕ್ತಿ" ಎಂದರು.


ಕನ್ನಡ ವಿಭಾಗದ ಮುಖ್ಯಸ್ಥೆ ಸುಚಿತ್ರಾ ಪಿ. ಶೆಟ್ಟಿ ಮಾತನಾಡಿ, "ಸಾಕ್ಷರತೆಯು ವ್ಯಕ್ತಿಯ ಸಾಮಾಜಿಕ ಪ್ರಜ್ಞೆಯನ್ನು ವಿಸ್ತರಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಮಾತೃಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಹೆಮ್ಮೆ ತಳೆದು, ಜ್ಞಾನವನ್ನು ಸಮಾಜದ ಒಳಿತಿಗಾಗಿ ಬಳಸಬೇಕು" ಎಂದು ಕರೆ ನೀಡಿದರು.


ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ವಂದನಾ ಮಾತನಾಡಿ, "ವಿವಿಧ ಭಾಷೆಗಳ ಅಂತಿಮ ಉದ್ದೇಶ ಮಾನವರನ್ನು ಸಂಪರ್ಕಿಸುವುದಾಗಿದೆ. ಸಾಕ್ಷರತೆಯು ಆತ್ಮವಿಶ್ವಾಸ ಹಾಗೂ ಸಮಾನತೆಯನ್ನು ಮೂಡಿಸುತ್ತದೆ" ಎಂದು ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಹಾರ್ದಿಕ್ ಪಿ. ಚೌಹಾಣ್ ಮಾತನಾಡಿ, "ಶಿಕ್ಷಣವು ಕೇವಲ ಪದವಿ ಪಡೆಯಲು ಸೀಮಿತವಾಗದೆ ವ್ಯಕ್ತಿತ್ವ ವಿಕಸನಕ್ಕೆ ದಾರಿಯಾಗಬೇಕು. ಗಳಿಸಿದ ಜ್ಞಾನದಿಂದ ಇತರರ ಜೀವನವನ್ನು ಉತ್ತಮಗೊಳಿಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ" ಎಂದು ಕಿವಿಮಾತು ಹೇಳಿದರು.


ದ್ವಿತೀಯ ಬಿ.ಬಿ.ಎ ವಿದ್ಯಾರ್ಥಿನಿ ಹವ್ವಾ ಶಬ್ನೂರ್ ಸ್ವಾಗತಿಸಿದರು. ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಬಿಂದು ಕುಲಾಲ್ ಕಾರ್ಯಕ್ರಮ ನಿರೂಪಿಸಿದರು. ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿನಿಯ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top