ಸೆ. 6 ರಂದು ಸುರತ್ಕಲ್ ಅಗರಮೇಲು ಶ್ರೀ ಜಾರಂದಾಯ ದೈವಸ್ಥಾನದಲ್ಲಿ ನೂತನ ಧ್ವಜಸ್ತಂಭಕ್ಕೆ ಎಳ್ಳೆಣ್ಣೆ ಸಮರ್ಪಣೆ

Upayuktha
0


ಸುರತ್ಕಲ್ : ಶ್ರೀ ಜಾರಂದಾಯ ದೈವಸ್ಥಾನ ಅಗರಮೇಲು ಸುರತ್ಕಲ್ ಶ್ರೀ ಕ್ಷೇತದ್ರಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ನೂತನ ಧ್ವಜಸ್ತಂಭ (ಕೊಡಿಮರ) ಕ್ಕೆ ಎಳ್ಳೆಣ್ಣೆ ಸಮರ್ಪಣಾ ಸೇವೆ ಸೆಪ್ಟಂಬರ್ 6 ರಂದು  ಆದಿತ್ಯವಾರ ಬೆಳಿಗ್ಗೆ 10 ಗಂಟೆಯಿಂದ ಪ್ರಾರಂಭಗೊಳ್ಳಲಿದೆ.


ದೈವಸ್ಥಾನದ ಸಮಗ್ರ ಜೀರ್ಣೋದ್ದಾರ ಸಲುವಾಗಿ ಊರ ಹತ್ತು ಸಮಸ್ತರು ಸೇರಿ ಮುಷ್ಟಿ ಕಾಣಿಕೆ ಸಮರ್ಪಣೆ ಮತ್ತು ಗಂಟೆ 11.30ಕ್ಕೆ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ ಮತ್ತು ಸಮಾಲೋಚನ ಸಭೆ ನಡೆಯಲಿದೆ.


ದೀಪ ಪ್ರಜ್ವಲನೆಯನ್ನು  ವೇದಮೂರ್ತಿ  ಕೆ. ಶ್ರೀ ಲಕ್ಷ್ಮಿನಾರಾಯಣ ಆಸ್ರಣ್ಣ, ಪ್ರಧಾನ ಅರ್ಚಕರು ಶ್ರೀ ಕ್ಷೇತ್ರ ಕಟೀಲು ನೆರವೇರಿಸಲಿದ್ದಾರೆ.


ಗುರುಪುರ ವಜ್ರದೇಹಿ ಮಠದ  ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. 

ಸಮಾರಂಭದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಡಾ ವೈ ಭರತ್ ಶೆಟ್ಟಿ, ಕೊಡಿಪಾಡಿ ಬಾಳಿಕೆ ಜಗನ್ನಾಥ ಅತ್ತಾರ್, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ  ಚರಣ್ ಜೆ. ಶೆಟ್ಟಿ ಕುಳಾಯಿಗುತ್ತು, ಕಾರ್ಯಧ್ಯಕ್ಷ ಡಾ.ಕೆ.ಪಿ.ಕೆ ಹೆಗ್ಡೆ ಭಾಗವಹಿಸಲಿದ್ದಾರೆ. ದೈವಸ್ಥಾನ ಟ್ರಸ್ಟ್ ಅಧ್ಯಕ್ಷರಾದ ಡಾ. ಟಿ.ರಮಾನಾಥ ಶೆಟ್ಟಿ,  ಕಾರ್ಯದರ್ಶಿ ಐ. ಜಯ ಅಮೀನ್, ಕೋಶಾಧಿಕಾರಿ ಭೋಜ ದೇವಾಡಿಗ  ಉಪಸ್ಥಿತರಿರುವರು. 


ಕೊಡಿಮರಕ್ಕೆ ಸಮರ್ಪಣೆಗೆ ಬೇಕಾಗುವ ಶುದ್ಧ ಎಳ್ಳೆಣ್ಣೆಯನ್ನು ಶ್ರೀ ಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ವಿನಂತಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top