ಚಿತ್ರಾಪುರದ ಶ್ರೀವಲಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ: ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Shreya Hegde
0



ಭಟ್ಕಳ:  2026–27 ನೇ ಶೈಕ್ಷಣಿಕ ವರ್ಷದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಭಟ್ಕಳ ತಾಲೂಕಿನ ಶಿರಾಲಿ ಶ್ರೀ ಚಿತ್ರಾಪುರ ಮಠದ ಸ್ವಾಯತ್ತತೆಗೆ ಒಳಪಟ್ಟಿರುವ ಶ್ರೀವಲಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡುವ ಮೂಲಕ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.


ಕಾಲೇಜಿನ ವಿದ್ಯಾರ್ಥಿಗಳಾದ ಕಿಶನ್ ಮಂಜುನಾಥ ನಾಯ್ಕ ಅವರು 100 ಮೀಟರ್ ಓಟದ ಸ್ಪರ್ಧೆಯಲ್ಲಿ ಹಾಗೂ 4 X 100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದರೆ, ಚರಣ ಲೋಕೇಶ ದೇವಾಡಿಗ ಅವರು 4 x 400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದುಕೊಂಡಿದ್ದಾರೆ. ಇದೇ ವೇಳೆ ಕರುಣ ದೇವೇಂದ್ರ ನಾಯ್ಕ ಅವರು 800 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.


2025 ರಲ್ಲಿ ಪ್ರಾರಂಭಗೊಂಡ ಶ್ರೀವಲಿ ಪಿ.ಯು. ಕಾಲೇಜು, ತನ್ನ ಎರಡನೇ ಶೈಕ್ಷಣಿಕ ವರ್ಷದಲ್ಲೇ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವಂತೆ ಮಾಡಿರುವುದು ಅತ್ಯಂತ ಶ್ಲಾಘನೀಯ ಸಂಗತಿಯಾಗಿದೆ.


ಸಾಧನೆಗೈದ ವಿದ್ಯಾರ್ಥಿಗಳಿಗೆ ಹಾಗೂ ಅವರ ಈ ಯಶಸ್ಸಿಗೆ ಕಾರಣಕರ್ತರಾದ ಮುಖ್ಯ ತರಬೇತುದಾರರು ಮತ್ತು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಕುಲದೀಪ್ ನಾಯ್ಕ ಅವರಿಗೆ ಕಾಲೇಜಿನ ಆಡಳಿತ ಮಂಡಳಿ, ಉತ್ತರ ಕನ್ನಡ ಪ.ಪೂ.ಶಿ. ಇಲಾಖೆಯ ಮಾನ್ಯ ಉಪನಿರ್ದೇಶಕರು, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಗೂ ಊರಿನ ನಾಗರಿಕರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top