ಮಹಾಮಸ್ತಕಾಭಿಷೇಕ ಹಾಗೂ ಕಾರ್ಕಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಿ: ಸಿಎಂಗೆ ಶಾಸಕ ಸುನಿಲ್ ಕುಮಾರ್ ಮನವಿ

Upayuktha
0


ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಮುಂಬರುವ ಐತಿಹಾಸಿಕ ಶ್ರೀ ಗೊಮ್ಮಟೇಶ್ವರಸ್ವಾಮಿಯ ಮಹಾಮಸ್ತಕಾಭಿಷೇಕದ ಪೂರ್ವಸಿದ್ದತೆಗಳ ಕುರಿತು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಸುದೀರ್ಘವಾಗಿ ಚರ್ಚಿಸಿ, ಮನವಿ ಸಲ್ಲಿಸಿದರು.


ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಐತಿಹಾಸಿಕ ಮಹಾ ಮಸ್ತಕಾಭಿಷೇಕವು 2027ರ ಫೆಬ್ರವರಿ 18ರಿಂದ ಹತ್ತು ದಿನಗಳ ಕಾಲ ನಡೆಯಲಿದೆ. ಈ ಮಹೋತ್ಸವಕ್ಕೆ ದೇಶ-ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಹಾಗೂ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ, ಕಾರ್ಕಳದಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಯಿತು.


ಇದೇ ಸಂದರ್ಭದಲ್ಲಿ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಬಾಕಿ ಇರುವ ಅನುದಾನಗಳ ಬಿಡುಗಡೆ ಹಾಗೂ ಹೊಸ ಯೋಜನೆಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡುವಂತೆ ಶಾಸಕರು ಒತ್ತಾಯಿಸಿದರು. ಸೆಪ್ಟೆಂಬರ್ 18, 2026ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯ ಮೂಲಕ ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಪೂರಕವಾದ ಶಾಶ್ವತ ಯೋಜನೆಗಳನ್ನು ರೂಪಿಸುವಂತೆಯೂ ಕೋರಲಾಯಿತು.


ಮುಖ್ಯಮಂತ್ರಿಯವರಿಗೆ ಸಲ್ಲಿಸಲಾದ ಪ್ರಮುಖ ಬೇಡಿಕೆಗಳು:


ಮಹಾಮಸ್ತಕಾಭಿಷೇಕ ಹಾಗೂ ರಸ್ತೆ ಅಭಿವೃದ್ಧಿ: ಗೊಮ್ಮಟೇಶ್ವರಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಮೂಲಭೂತ ಸೌಕರ್ಯಗಳಿಗೆ ವಿಶೇಷ ಅನುದಾನ ಹಾಗೂ ಕಾರ್ಕಳ ಪುರಸಭಾ ವ್ಯಾಪ್ತಿ ಮತ್ತು ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ.


ಭಾಷೆ ಮತ್ತು ಕ್ರೀಡೆ: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವುದು ಹಾಗೂ ಕರಾವಳಿ ಜಿಲ್ಲೆಗಳ ಕಂಬಳ ಕ್ರೀಡಾಕೂಟಗಳಿಗೆ ಹೆಚ್ಚಿನ ಅನುದಾನ ಒದಗಿಸುವುದು.


ಪ್ರವಾಸೋದ್ಯಮ ವೃದ್ಧಿ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್‌, ಐತಿಹಾಸಿಕ ರಾಮಸಮುದ್ರ ಕೆರೆ ಹಾಗೂ ಉದ್ಯಾನವನ, ವರಂಗ ಚತುರ್ಮುಖ ಕೆರೆ ಬಸದಿ ಮತ್ತು ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕೂಡ್ಲು ಫಾಲ್ಸ್‌ ಅಭಿವೃದ್ಧಿ.


ಸಾರಿಗೆ ಸಂಪರ್ಕ: ಹಿರಿಯಡ್ಕ–ಕಾರ್ಕಳ–ಜೋಡುರಸ್ತೆ–ಮಿಯ್ಯಾರು–ಬಜಗೋಳಿ ಮಾರ್ಗವಾಗಿ ಗುರುವಾಯನಕೆರೆವರೆಗೆ ರಸ್ತೆ ಅಭಿವೃದ್ಧಿ.


ಉದ್ಯೋಗ ಹಾಗೂ ಕೈಗಾರಿಕೆ: ಯುವ ಸಮುದಾಯಕ್ಕೆ ಸ್ವಯಂ ಉದ್ಯೋಗದ ಅವಕಾಶ ಕಲ್ಪಿಸಲು ಕಾರ್ಕಳದಲ್ಲಿ ಶಿಲ್ಪಕಲಾ ಹಾಗೂ ಫರ್ನಿಚರ್ ಹಬ್ ಸ್ಥಾಪನೆ ಮತ್ತು ಕಾರ್ಕಳ ಜವಳಿ ಪಾರ್ಕ್ ಯೋಜನೆಯ ಅಭಿವೃದ್ಧಿ.


ಆರೋಗ್ಯ ಮತ್ತು ನೀರಾವರಿ: ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆಗಳ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸುವುದು, ಕಾರ್ಕಳ ನರ್ಸಿಂಗ್ ಕಾಲೇಜಿಗೆ ನೂತನ ಕಟ್ಟಡ ನಿರ್ಮಾಣ ಹಾಗೂ ಹೆಬ್ರಿ ತಾಲೂಕಿನ ಬೇಳಂಜೆ ಗ್ರಾಮದ ಇಕ್ಕೊಡ್ಡು ಬಳಿ ಏತ ನೀರಾವರಿ ಯೋಜನೆ ಅನುಷ್ಠಾನ.


ಕಾರ್ಕಳದ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ ಸೂಕ್ತ ಮತ್ತು ಸಕಾರಾತ್ಮಕ ಸ್ಪಂದನೆ ದೊರೆಯುವ ವಿಶ್ವಾಸವಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top