ಕಾಪು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕಾಪು, ಉಡುಪಿ ಇಲ್ಲಿ ಬುಧವಾರದಂದು ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ, ಪುಸ್ತಕ ಪ್ರದರ್ಶನ ಹಾಗೂ “ಓದಿನಿಂದ ವ್ಯಕ್ತಿತ್ವ ವಿಕಸನ” ವಿಷಯ ಕುರಿತ ವಿಶೇಷ ಉಪನ್ಯಾಸವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಟ್ಟಂಪಾಡಿಯ ಸಹ ಪ್ರಾಧ್ಯಾಪಕ ಶ್ರೇಣಿಯ ಗ್ರಂಥಪಾಲಕರಾದ ರಾಮ ಕೆ ಮಾತನಾಡಿ, ವಿದ್ಯಾರ್ಥಿಗಳು ಗ್ರಂಥಾಲಯದಲ್ಲಿ ಲಭ್ಯವಿರುವ ಮುದ್ರಿತ ಹಾಗೂ ಡಿಜಿಟಲ್ ಪುಸ್ತಕಗಳನ್ನು ನಿರಂತರವಾಗಿ ಓದುವ ಮೂಲಕ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಉತ್ತಮ ಓದುವ ಹವ್ಯಾಸವು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದ್ದು, ಸಮಾಜದಲ್ಲಿ ಉನ್ನತ ಸ್ಥಾನಮಾನ ಗಳಿಸಲು ಸಹಕಾರಿಯಾಗುತ್ತದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗೋಪಾಲಕೃಷ್ಣ ಎಂ ಗಾoವ್ಕರ್ ವಹಿಸಿ ಕಾಲೇಜಿನಲ್ಲಿ ಸಿಗುವ ಎಲ್ಲಾ ಸವಲತ್ತುಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಉತ್ತಮ ವ್ಯಕ್ತಿಗಳಾಗಿ ಎಂದು ಕರೆ ನೀಡಿದರು. ಐಕ್ಯೂಎಸಿ ಸಂಚಾಲಕಿ ಡಾ. ರೋಶ್ನಿ ಯಶವಂತರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಯೋಜಕರಾದ ಕಾಲೇಜಿನ ಗ್ರಂಥಪಾಲಕರಾದ ಪ್ರೊ. ಯಶೋಧಾ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ಗ್ರಂಥಾಲಯದಲ್ಲಿ ವಿಶೇಷ ಪುಸ್ತಕ ಪ್ರದರ್ಶನ ಏರ್ಪಡಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಆಸಕ್ತಿಯಿಂದ ವೀಕ್ಷಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಶ್ರೇಯ ಕಾರ್ಯಕ್ರಮ ನಿರೂಪಿಸಿದರು, ಪ್ರೀತಿ ಮತ್ತು ಬಳಗದವರು ಪ್ರಾರ್ಥಿಸಿದರು, ನಿಧಿ ಅತಿಥಿಯನ್ನು ಪರಿಚಯಿಸಿದರು. ರೇಷ್ಮಾ ವಂದನಾರ್ಪಣ ಗೈದರು. ಕಾಲೇಜಿನ ಎಲ್ಲಾ ಪದವಿ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


