ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ ನಾಳೆ ‘ಲಿಯೋರಾ - ಮೈ ಲೈಟ್’ ಆಚರಣೆ

Shreya Hegde
0


ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾನಿಲಯದ ವತಿಯಿಂದ ಸೆಪ್ಟೆಂಬರ್ 23, 2026 ರಂದು ನಗರದ ಪಾಂಡೇಶ್ವರದಲ್ಲಿರುವ ವಿಶ್ವವಿದ್ಯಾನಿಲಯದ ಸಿಟಿ ಕ್ಯಾಂಪಸ್‌ನಲ್ಲಿ ‘ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ – ಲಿಯೋರಾ ಮೈ ಲೈಟ್’ (Observation of Suicide Prevention Day - LIORA my light) ಕಾರ್ಯಕ್ರಮವನ್ನು  ಆಯೋಜಿಸಲಾಗಿದೆ.


ಬೆಳಗ್ಗೆ 10.00 ಗಂಟೆಗೆ ಆರಂಭವಾಗಲಿರುವ ಈ ಕಾರ್ಯಕ್ರಮವು ಜೀವನ ಮತ್ತು ನಂಬಿಕೆಯ ಸಂಕೇತವಾಗಿ ಮೂಡಿಬರಲಿದೆ. "ಒಟ್ಟಾಗಿ ಭರವಸೆ, ಬೆಂಬಲ ಮತ್ತು ಜೀವನವನ್ನು ಬದಲಾಯಿಸುವ ಶಕ್ತಿಗಾಗಿ ಬೆಳಕನ್ನು ಚೆಲ್ಲೋಣ" ಎಂಬ ಧ್ಯೇಯದೊಂದಿಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.


ವಿಶ್ವವಿದ್ಯಾನಿಲಯದ ಗೌರವಾನ್ವಿತ ಕುಲಾಧಿಪತಿ ಹಾಗೂ ಎ. ಶಾಮ ರಾವ್ ಫೌಂಡೇಶನ್‌ನ ಅಧ್ಯಕ್ಷರಾದ ಡಾ. ಎ. ಶ್ರೀನಿವಾಸ ರಾವ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪಾಂಡೇಶ್ವರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ರಾಘವೇಂದ್ರ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.


ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಶ್ರೀನಿವಾಸ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿಯ ಟ್ರಸ್ಟಿ ಸದಸ್ಯರಾದ ಶ್ರೀಮತಿ ವಿಜಯಲಕ್ಷ್ಮಿ ಆರ್. ರಾವ್, ಪ್ರೊ. ಇಂಜಿನಿಯರ್ ಶ್ರೀಮತಿ ಎ. ಮಿತ್ರಾ ಎಸ್. ರಾವ್, ಕುಮಾರಿ ಎ. ಮೇಘನಾ ರಾವ್, ಕುಮಾರಿ ಎ. ಸಮನಾ ರಾವ್,  ಎ. ಈಶನ್ ರಾವ್ ಹಾಗೂ ವಿಶ್ವವಿದ್ಯಾನಿಲಯದ ಉಪಕುಲಾಧಿಪತಿಗಳಾದ ಡಾ. ಕೆ. ಸತ್ಯನಾರಾಯಣ ರೆಡ್ಡಿ ಅವರು ಉಪಸ್ಥಿತರಿರುವರು.


ಎಸ್.ಐ.ಎಂ.ಎಸ್. ಮತ್ತು ಆರ್.ಸಿ.ಯ ಮನೋವೈದ್ಯಕೀಯ ವಿಭಾಗದ ಪ್ರೊಫೆಸರ್ ಡಾ. ಮಿಥುನ್ ಎಸ್. ಅವರು ವಿಶೇಷ ಆಹ್ವಾನಿತರಾಗಿ ಹಾಗೂ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಆತ್ಮಹತ್ಯೆ ತಡೆಗಟ್ಟುವ ಕುರಿತು ಜಾಗೃತಿ ಮೂಡಿಸಲಿದ್ದಾರೆ.


ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಅನಿಲ್ ಕುಮಾರ್, ಮೌಲ್ಯಮಾಪನ ಕುಲಸಚಿವರಾದ ಡಾ. ಶ್ರೀನಿವಾಸ ಮಯ್ಯ ಡಿ., ಶೈಕ್ಷಣಿಕ ಕುಲಸಚಿವರಾದ  ಆದಿತ್ಯ ಕುಮಾರ್ ಮಯ್ಯ ಮತ್ತು ಅಭಿವೃದ್ಧಿ ಕುಲಸಚಿವರಾದ ಡಾ. ಅಜಯ್ ಕುಮಾರ್ ಹಾಗೂ ವಿಶ್ವವಿದ್ಯಾನಿಲಯದ ಎಲ್ಲಾ ಡೀನ್‌ಗಳು, ವಿಭಾಗ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top