ಮಂಗಳೂರು: ಇಲ್ಲಿನ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್‌ನಲ್ಲಿ 'ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಅಂಡ್ ಟೂರಿಸಂ', ಇಂಟೀರಿಯರ್ ಡಿಸೈನ್, ಬಿ.ಎಸ್ಸಿ ಎನಿಮೇಷನ್ ಹಾಗೂ ಮಾಸ್ ಕಮ್ಯುನಿಕೇಷನ್ ಅಂಡ್ ಮೀಡಿಯಾ ಸ್ಟಡೀಸ್ ವಿಭಾಗಗಳ ಜಂಟಿ ಆಶ್ರಯದಲ್ಲಿ "ಓಣಾಷ್ಟಮಿ - 2026" (ONASHTAMI 2026) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಸಾಂಸ್ಕೃತಿಕ ಸಂಭ್ರಮವು ಸೆಪ್ಟೆಂಬರ್ 10, 2026ರ ಗುರುವಾರದಂದು ಬೆಳಿಗ್ಗೆ 10:30 ರಿಂದ ಆರಂಭಗೊಳ್ಳಲಿದೆ.
ಈ ವಿಶೇಷ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿವಾಸ್ ವಿಶ್ವವಿದ್ಯಾಲಯದ ಮಾನ್ಯ ಕುಲಾಧಿಪತಿಗಳು ಹಾಗೂ ಎ. ಶ್ಯಾಮ ರಾವ್ ಫೌಂಡೇಶನ್‌ನ ಅಧ್ಯಕ್ಷರಾದ ಡಾ. ಎ. ಶ್ರೀನಿವಾಸ್ ರಾವ್ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಟ್ರಸ್ಟಿ ಸದಸ್ಯರುಗಳಾದ ಶ್ರೀಮತಿ ವಿಜಯಲಕ್ಷ್ಮಿ ಆರ್. ರಾವ್, ಪ್ರೊ. ಎರ್. ಶ್ರೀಮತಿ ಎ. ಮಿತ್ರಾ ಎಸ್. ರಾವ್, ಶ್ರೀಮತಿ ಪದ್ಮಿನಿ ಕುಮಾರ್, ಕುಮಾರಿ ಎ. ಮೇಘನಾ ಎಸ್. ರಾವ್, ಕುಮಾರಿ ಎ. ಸಮಾನಾ ಎಸ್. ರಾವ್ ಮತ್ತು ಶ್ರೀ ಎ. ಈಶಾನ್ ಎಸ್. ರಾವ್ ಅವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದರೊಂದಿಗೆ ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಕೆ. ಸತ್ಯನಾರಾಯಣ ರೆಡ್ಡಿ ಅವರೂ ಸಹ ಗೌರವ ಅತಿಥಿಯಾಗಿ ಉಪಸ್ಥಿತರಿರಲಿದ್ದಾರೆ..
ಅಲ್ಲದೆ, ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಅನಿಲ್ ಕುಮಾರ್, ಡಾ. ಶ್ರೀನಿವಾಸ ಮಯ್ಯ ಡಿ, ಡಾ. ಅಜಯ್ ಕುಮಾರ್, ಡಾ. ಆದಿತ್ಯ ಕುಮಾರ್ ಮಯ್ಯ, ಬಿಎಚ್‌ಎಂಟಿ ವಿಭಾಗದ ಡೀನ್ ಪ್ರೊ. ಬಿ. ಪ್ರಶಾಂತ್ ಪ್ರಭು ಸೇರಿದಂತೆ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಅಂಡ್ ಟೂರಿಸಂ ವಿಭಾಗದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿವರ್ಗದವರು ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

