'ನಾನಲ್ಲ, ನೀನು’ ಸೇವಾ ಮನೋಭಾವ ಬೆಳೆಸಿಕೊಳ್ಳಿ- ಡಾ. ಶೇಷಪ್ಪ ಕೆ.

Upayuktha
0

ಸಂತ ಫಿಲೋಮಿನಾ ಕಾಲೇಜಿನಲ್ಲಿ ಎನ್‌ಎಸ್‌ಎಸ್ ದಿನಾಚರಣೆ ಹಾಗೂ ವಾರ್ಷಿಕ ‘ಫಿಲೋ ಸೇವಾಮೃತ–2026’



ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ಸಂಯೋಜಿತ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಎನ್‌ಎಸ್‌ಎಸ್ ದಿನಾಚರಣೆ ಹಾಗೂ ವಾರ್ಷಿಕ ‘ಫಿಲೋ ಸೇವಾಮೃತ–2026’ ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ನಡೆಯಿತು.


ಮಂಗಳೂರು ವಿಶ್ವವಿದ್ಯಾನಿಲಯದ ಎನ್‌ಎಸ್‌ಎಸ್ ಯೋಜನಾ ಸಂಯೋಜಕರಾದ ಡಾ. ಶೇಷಪ್ಪ ಕೆ. ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಎನ್‌ಎಸ್‌ಎಸ್ ಕಾರ್ಯಕರ್ತರು ಸದಾ ಸತ್ಯದ ದೃಷ್ಟಿಕೋನದಲ್ಲಿ ಕಾರ್ಯನಿರ್ವಹಿಸಬೇಕು. ‘ಎನ್‌ಎಸ್‌ಎಸ್’ ಎಂದರೆ ‘ನಾನಲ್ಲ, ನೀನು’ ಎಂಬ ಸೇವಾ ಮನೋಭಾವ.


ಸಣ್ಣ-ಸಣ್ಣ ಸೇವಾ ಕಾರ್ಯಗಳ ಮೂಲಕ ಉತ್ತಮ ಸಮುದಾಯವನ್ನು ನಿರ್ಮಿಸಬೇಕು. ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಮನಸ್ಸಿನಲ್ಲಿ ಇಚ್ಛಾಶಕ್ತಿ ಇರಬೇಕು. ಗ್ರಾಮೀಣ ಸಂಸ್ಕೃತಿಗೆ ಮಹತ್ವ ನೀಡುವುದರೊಂದಿಗೆ ಯಾವುದೇ ಕಾರ್ಯವನ್ನು ಸಂಪೂರ್ಣ ಬದ್ಧತೆಯಿಂದ ನಿರ್ವಹಿಸಬೇಕು ಎಂದು ಹೇಳಿದರು.


ಸಂತ ಫಿಲೋಮಿನಾ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ವಿಜಯಕುಮಾರ್ ಮೊಳೆಯಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಗತ್ತಿನ ಶ್ರೇಷ್ಠ ಸಂಪತ್ತು ಮಾನವನ ವ್ಯಕ್ತಿತ್ವದಲ್ಲಿ ಅಡಗಿದೆ. ಮಾನವಕುಲದ ಸೇವೆಯೇ ಜೀವನದ ಅತ್ಯುತ್ತಮ ಕಾರ್ಯವಾಗಿದ್ದು, ಪ್ರತಿಯೊಬ್ಬರೂ ಸೇವಾ ಮನೋಭಾವವನ್ನು ಬೆಳೆಸಿಕೊಂಡು ಸಮಾಜಮುಖಿ ಕಾರ್ಯಗಳಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.


ಸಮಾರಂಭದಲ್ಲಿ ಎನ್‌ಎಸ್‌ಎಸ್ ಅಧಿಕಾರಿ ಡಾ. ಕೆ. ಚಂದ್ರಶೇಖರ್ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.


ಎನ್‌ಎಸ್‌ಎಸ್ ಅಧಿಕಾರಿ ಡಾ. ಕೆ. ಚಂದ್ರಶೇಖರ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎನ್‌ಎಸ್‌ಎಸ್ ಘಟಕದ ನಾಯಕ ಬೃಂದಾನ್ ಅವರು ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಅಪರ್ಣಾ ಮತ್ತು ತಂಡದವರು ಪ್ರಾರ್ಥಿಸಿದರು. ಎನ್‌ಎಸ್‌ಎಸ್ ಅಧಿಕಾರಿ ಪುಷ್ಪಾ ಎನ್. ಅವರು ಸ್ವಾಗತಿಸಿದರು. ಎನ್‌ಎಸ್‌ಎಸ್ ನಾಯಕ ಸಾಯಿ ಪ್ರತೀಶ್ ಅವರು ವಂದಿಸಿದರು.


ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಕಾರ್ಯದರ್ಶಿ ಕಾರ್ತಿಕ್ ಪಿ.ಸಿ., ಎನ್‌ಎಸ್‌ಎಸ್ ಘಟಕದ ನಾಯಕರಾದ ಸ್ಪಂದನ ಹಾಗೂ ಶಿಲ್ಪಾ ಉಪಸ್ಥಿತರಿದ್ದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top