ಮಂಗಳೂರು: “ಶಿಕ್ಷಕರು ವಿದ್ಯಾರ್ಥಿಗಳಿಗೆ ಜ್ಞಾನ, ನೈತಿಕತೆ, ಕೌಶಲ್ಯ, ಶಿಸ್ತು ಜೀವನದ ಮೌಲ್ಯಗಳನ್ನು ಕಲಿಸಿ ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಯಾಗಿ ರೂಪಿಸುವ ನೈಜ್ಯ ಅಕ್ಷರ ಶಿಲ್ಪಿಗಳು” ಎಂದು ನಗರದ ಕೆನರಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹಾಗೂ ರೋಟರಿ ಜಿಲ್ಲಾ 3181 ರ ಆಡಳಿತ ಸಮಿತಿಯ ಕಾರ್ಯದರ್ಶಿಯವರಾದ ಗೋಪಾಲಕೃಷ್ಣ ಶೆಟ್ಟಿ ಅಭಿಪ್ರಾಯ ವ್ಯಕ್ತ ಪಡಿಸಿದರು.
ಅವರು ರೋಟರಿ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಆಶ್ರಯದಲ್ಲಿ ತಾ.10.09.2026 ರಂದು ನಗರದ ಈಡನ್ ಕ್ಲಬ್ ಸಭಾಂಗಣದಲ್ಲಿ ಜರಗಿದ “ಶಿಕ್ಷಕರ ದಿನಾಚರಣೆ”ಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಸದಸ್ಯರನ್ನು, ಅತಿಥಿಗಳನ್ನು ಉದ್ದೇಶಿಸಿ ಮಾತಾನಾಡಿದರು. ವಿದ್ಯಾರ್ಥಿಗಳ ಯಶಸ್ಸಿನ ಹಿಂದೆ ಶಿಕ್ಷಕರ ಮಾರ್ಗದರ್ಶನ ಪ್ರೋತ್ಸಾಹ ಮತ್ತು ಪರಿಶ್ರಮ ಅಡಗಿದೆ ಎಂದು ಮಾಹಿತಿ ನೀಡಿದರು.
ರೋಟರಿ ಸಂಸ್ಥೆಯ ವಲಯ ಸಹಾಯಕ ಗವರ್ನರ್ ಡಾ| ಅರವಿಂದ್ ಅವರು ಗೌರವ ಅತಿಥಿಯಾಗಿ ಪಾಲ್ಗೊಂಡು ಪ್ರಸ್ತಾವಿಕವಾಗಿ ಮಾತನಾಡಿ ಶುಭಾಶಯ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಾಲ್ಯ ಪದವು ಸರ್ಕಾರಿ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿಯರಾದ ಶ್ರೀಮತಿ ದಾಕ್ಷಾಯಿನಿ ಮತ್ತು ಆದರ್ಶ ವಿದ್ಯಾನಿಲಯದ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಸುಲೋಚನಿ ಯವರು ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸುಧೀರ್ಘ, ಅನುಪಮ ಸೇವೆ ನೀಡಿದ ಕೊಡುಗೆ, ಸಾಧಿಸಿದ ಸಾಧೆನಯನ್ನು ಪರಿಗಣಿಸಿ ಅಂತರಾಷ್ಟ್ರೀಯ ರೋಟರಿ ಸಂಸ್ಥೆಯ “ರಾಷ್ಟç ನಿರ್ಮಾತ ಪ್ರಶಸ್ತಿ”ಯನ್ನು ಪ್ರದಾನ ಮಾಡಿ ಅಭಿನಂದಿಸಲಾಯಿತು. ಶ್ರೀಮತಿ ಮಂಗಳ ರೈ ಮತ್ತು ಗಣೇಶ್ ಅವರು ಪ್ರಶಸ್ತಿ ವಿಜೇತರ ಪರಿಚಯ ಸಾಧಿಸಿದ ಸಾಧನೆಗಳ ವಿವರ ನೀಡಿದರು.
ಸಂಸ್ಥೆಯ ಅಧ್ಯಕ್ಷ ಸನಿತ್ ಶೇಟ್ ಸ್ವಾಗತಿಸಿ ದಿನಾಚರಣೆಯ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿ ಈ ದಿನ ನಮಗೆ ಶಿಕ್ಷಣ ಧಾರೆಯೆರೆದ ಗುರುಗಳಿಗೆ ವಂದನೆ ಮತ್ತು ಕೃತಜ್ಞತೆ ಸಲ್ಲಿಸುವ ಪವಿತ್ರ ದಿನ ಎಂದು ಮಾಹಿತಿ ನೀಡಿದರು.
ಕಾರ್ಯದರ್ಶಿ ನಿತಿನ್ ವರದಿ ಮಂಡಿಸಿ, ಬಳಿಕ ವಂದಿಸಿದರು. ವೇದಿಕೆಯಲ್ಲಿ ಸಂಸ್ಥೆಯ ಸ್ಥಾಪನಾ ಅಧ್ಯಕ್ಷ ಡಾ| ರಂಜನ್, ದಂಡಾಧಿಕಾರಿ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
