ಸುದಾನ ಶಾಲೆಯ ಪ್ರಧಾನ್ ಪಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

Upayuktha
0



ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಹಾಗೂ ಕೆ.ಪಿ.ಎಸ್. ಶಾಲೆ, ಬೆಳ್ಳಾರೆ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುದಾನ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.


14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸುದಾನ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಪ್ರಧಾನ್ ಪಿ., ಪ್ರಥಮ ಸ್ಥಾನ ಪಡೆದು, ಬೆಂಗಳೂರು ಗ್ರಾಮಾಂತರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅವರು ಬಿ. ರವಿಕುಮಾರ್ ಹಾಗೂ ವಿಶಾಲಾಕ್ಷಿ ದಂಪತಿಯ ಪುತ್ರರಾಗಿದ್ದಾರೆ.


ಇದೇ ಸ್ಪರ್ಧೆಯ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಸುದಾನ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಮಾನ್ಸಿ ಅಧಿಕ ರಾವ್ ಕದಂ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.


ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಸಂಚಾಲಕರಾದ ರೆ. ವಿಜಯ್ ಹಾರ್ವಿನ್, ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಅಭಿನಂದನೆ ಸಲ್ಲಿಸಿ, ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top