ಸುರತ್ಕಲ್ ಬಂಟರ ಭವನದಲ್ಲಿ ಸಸ್ಯೋತ್ಸವ, ಆಹಾರ ಮೇಳ ಆರಂಭ

Shreya Hegde
0


ಸುರತ್ಕಲ್: ರೈತ ಕುಡ್ಲ ಪ್ರತಿಷ್ಠಾನ ನೇತೃತ್ವದಲ್ಲಿ ಬಂಟರ ಸಂಘ (ರಿ) ಸುರತ್ಕಲ್ ಮತ್ತು ಲಯನ್ಸ್ ಕ್ಲಬ್ ಸುರತ್ಕಲ್ ಇವುಗಳ ಸಹಯೋಗದೊಂದಿಗೆ ಪ್ರಪ್ರಥಮ ಬಾರಿಗೆ ಸಸ್ಯೋತ್ಸವ, ಆಹಾರ ಮೇಳ ಹಾಗೂ ಹೋಳಿಗೆ ಹಬ್ಬ   ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. 


ಕಾರ್ಯಕ್ರಮವನ್ನು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ನ ಅಧ್ಯಕ್ಷ ರಮೇಶ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಬಂಟರ ಭವನದಲ್ಲಿ  ಪ್ರಫ್ರಥಮ ಬಾರಿಗೆ ನಡೆಯುವ ಸಸ್ಯೋತ್ಸವ, ಆಹಾರ ಮೇಳಕ್ಕೆ ಜನತೆಯ ಪ್ರೋತ್ಸಾಹ  ಹೆಚ್ಚು ಬೇಕು ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ  ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ  ಅವರು, “ರೈತ ಕುಡ್ಲ ಪ್ರತಿಷ್ಠಾನ, ಬಂಟರ ಸಂಘ, ಲಯನ್ಸ್ ಕ್ಲಬ್ ಇದರ ಸಹಯೋಗದಲ್ಲಿ ಆಯೋಜನೆ ಮಾಡಿರುವ ಈ ಕಾರ್ಯಕ್ರಮಕ್ಕೆ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದೆ. ಇಲ್ಲಿ ಜನರಿಗೆ ಕೈಗೆಟುಕುವ ಬೆಲೆಯಲ್ಲಿ ಬಟ್ಟೆಬರೆ, ಹೂವು ತರಕಾರಿ ಸಸ್ಯಗಳು, ತಿಂಡಿ ತಿನಿಸು, ನಾನಾ ಬಗೆಯ ಆಹಾರ ಖಾದ್ಯಗಳು ಸಿಗುತ್ತಿದೆ. ಎಲ್ಲರೂ ಆಗಮಿಸುವ ಮೂಲಕ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು" ಎಂದರು. 


ಬಳಿಕ ಮಾತಾಡಿದ ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ ತಡಂಬೈಲ್ ಅವರು, “ರೈತ ಕುಡ್ಲ ಪ್ರತಿಷ್ಠಾನ ಒಂದು ಒಳ್ಳೆಯ ಕಾರ್ಯಕ್ರಮ ಹಮ್ಮಿಕೊಂಡಿದೆ. ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲರ ಸಹಕಾರ ಬೇಕಿದೆ” ಎಂದರು. ಎಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ಸು ಕಾಣಲಿ” ಎಂದು ಶುಭ ಹಾರೈಸಿದರು.


ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಸುರತ್ಕಲ್ ಇದರ ಅಧ್ಯಕ್ಷ ಜಯೇಶ್ ಗೋವಿಂದ್, ಸುರತ್ಕಲ್  ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಬಂಟರ ಸಂಘ ಸುರತ್ಕಲ್ ಮಹಿಳಾ ವೇದಿಕೆ ಅಧ್ಯಕ್ಷೆ ಸರೋಜಾ ಟಿ. ಶೆಟ್ಟಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಆಪದ್ಭಾಂಧವ ಸಂಘಟನೆಯ ಉಮೇಶ್ ಇಡ್ಯಾ, ರೈತಕುಡ್ಲ ಪ್ರತಿಷ್ಠಾನದ ಕಾರ್ಯದರ್ಶಿ ಲತೀಶ್ ಮಳಲಿ ಮತ್ತಿತರರು ಉಪಸ್ಥಿತರಿದ್ದರು. 


ಬಂಟರ ಸಂಘದ ಕೃಷಿ ಸಮಿತಿಯ ಸಂಚಾಲಕ ಸುಧಾಕರ ಶೆಟ್ಟಿ ಖಂಡಿಗೆ ಇವರನ್ನು ಸನ್ಮಾನಿಸಲಾಯಿತು.ರಾಜೇಶ್ವರಿ ಡಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಲಯನ್ ರಾಜಯ್ಯ ವಂದಿಸಿದರು. ರೈತಕುಡ್ಲ ಪ್ರತಿಷ್ಠಾನದ ಅಧ್ಯಕ್ಷ ಭರತ್ ರಾಜ್ ಸೊರಕೆ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top