ಶಿಕ್ಷಕರನ್ನು ಗೌರವಿಸುವ ಕಾರ್ಯ ನಿರಂತರವಾಗಿ ನಡೆಯಲಿ: ಸುರತ್ಕಲ್ ರೋಟರಿ ಅಧ್ಯಕ್ಷ ಶ್ರೀಧರ್ ಟಿ. ಎನ್.

Upayuktha
0


ಸುರತ್ಕಲ್: ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುತ್ತಾ ಅವರನ್ನು ಉತ್ತಮ ಸತ್ಪ್ರಜೆಗಳನ್ನಾಗಿ ರೂಪಿಸುವ ಶಿಕ್ಷಕರನ್ನು ಗೌರವಿಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಸುರತ್ಕಲ್ ರೋಟರಿ ಕ್ಲಬ್‌ನ ಅಧ್ಯಕ್ಷ ಶ್ರೀಧರ್ ಟಿ. ಎನ್. ಹೇಳಿದರು.


ಅವರು ಸುರತ್ಕಲ್ ರೋಟರಿ ಕ್ಲಬ್ ಹಾಗೂ ಇಂಟರಾಕ್ಟ್ ಕ್ಲಬ್ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಗುರುಗಳಿಗೆ ನಮನ' ಕಾರ್ಯಕ್ರಮದಲ್ಲಿ ಮಧ್ಯ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಶಿಕ್ಷಕರನ್ನು ಅಭಿನಂದಿಸಿ ಮಾತನಾಡುತ್ತಿದ್ದರು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಪುಷ್ಪರಾಜ ಶೆಟ್ಟಿ ಮಾತನಾಡಿ, "ಶಿಕ್ಷಕರ ಸೇವೆಯನ್ನು ಗುರುತಿಸಿ ಗೌರವಿಸುವ ಇಂತಹ ಕಾರ್ಯಕ್ರಮಗಳು ಅವರ ವೃತ್ತಿಜೀವನಕ್ಕೆ ಹೆಚ್ಚಿನ ಸ್ಫೂರ್ತಿ ಮತ್ತು ಉತ್ಸಾಹ ನೀಡುತ್ತವೆ" ಎಂದು ಅಭಿಪ್ರಾಯಪಟ್ಟರು.


ಇದೇ ಸಂದರ್ಭದಲ್ಲಿ ಸುರತ್ಕಲ್ ರೋಟರಿ ಕ್ಲಬ್‌ನ ನಿಯೋಜಿತ ಅಧ್ಯಕ್ಷ ಕೃಷ್ಣ ಮೂರ್ತಿ ಹಾಗೂ ಪೂರ್ವ ಅಧ್ಯಕ್ಷ ರಮೇಶ್ ರಾವ್ ಶುಭ ಹಾರೈಸಿದರು. ರೋಟರಿ ಕ್ಲಬ್ ನಿರ್ದೇಶಕ ರಮೇಶ್ ಭಟ್ ಎಸ್. ಜೆ. ಅವರು ಅಭಿನಂದನಾ ಪತ್ರ ವಾಚಿಸಿದರು.


ಸಮಾರಂಭದಲ್ಲಿ ಶಾಲೆಗೆ ಅಭಿನಂದನಾ ಗೌರವ ಫಲಕವನ್ನು ಹಸ್ತಾಂತರಿಸಲಾಯಿತು ಹಾಗೂ ಶಾಲೆಯ ಎಲ್ಲಾ ಶಿಕ್ಷಕರನ್ನು ಆತ್ಮೀಯವಾಗಿ ಗೌರವಿಸಲಾಯಿತು.


ವೇದಿಕೆಯಲ್ಲಿ ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್‌ನ ಕೋಶಾಧಿಕಾರಿ ವಿಠ್ಠಲ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಹಾಗೂ ರೋಟರಿ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top