ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: VPU ಬಾಲಕರ ತಂಡಕ್ಕೆ ದ್ವಿತೀಯ ಸ್ಥಾನ

Shreya Hegde
0

 ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ




ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಸುದಾನ ಪದವಿಪೂರ್ವ ಕಾಲೇಜು, ಇದರ ಸಹಯೋಗದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನಗಳಿಸಿದೆ.


ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಪ್ರೀತಂ.ಸಿ.ಆರ್, ಚೇತನ್.ಎಂ.ಎಂ, ನಿರೀಕ್ಷಿತ್, ಪ್ರೀತಂ, ಜಯಂತ್.ಕೆ.ಎಸ್ ದ್ವಿತೀಯ ಪಿಯುಸಿಯ ಕಾರ್ತಿಕ್ ಕೆಮ್ಮಿಂಜೆ, ಸಾತ್ವಿಕ್, ಅಮೃತ್.ಬಿ.ಕೆ, ವರ್ಷಿತ್.ಬಿ.ಎಂ , ಭವಿಶ್ ಡಿ ಗೌಡ , ಪೃಥ್ವಿರಾಜ್.ಕೆ.ಆರ್ ,ಆತ್ಮಿಕ್ .ಎ.ಎಸ್ ಭಾಗವಹಿಸಿರುತ್ತಾರೆ. ದ್ವಿತೀಯ ವಿಜ್ಞಾನ ವಿಭಾಗದ ಅಮೃತ್ ಬಿ. ಕೆ ಅವರು ಪಂದ್ಯಾಟದ ಬೆಸ್ಟ್ ಅಟ್ಯಾಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.


ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ , ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top