ಸುರತ್ಕಲ್: ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೊಳಪಟ್ಟ ಇಲ್ಲಿನ ಇಡ್ಯಾದ ವಿದ್ಯಾದಾಯಿನೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ (CBSE) ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ವೈಭವ ಮತ್ತು ಸಂಭ್ರಮದಿಂದ ಜರಗಿತು. ಶಾಲೆಯ ಪ್ರಾಂಶುಪಾಲರಾದ ಡಾ. ಶಶಿಕುಮಾರ್ ಕೆ. ಸಿ. ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಆಡಳಿತ ಮಂಡಳಿಯ ಅಧ್ಯಕ್ಷರಾದ ಜಯಚಂದ್ರ ಹತ್ವಾರ್ ಮಾತನಾಡಿ, "ಶಿಕ್ಷಕರು ಶಾಲಾ ಆಡಳಿತ ಮಂಡಳಿಯ ಬೆನ್ನೆಲುಬು" ಎಂದು ಬಣ್ಣಿಸಿ, ಸಂಸ್ಥೆಯ ಬೆಳವಣಿಗೆಗೆ ಶಿಕ್ಷಕರು ನೀಡುತ್ತಿರುವ ಬೆಂಬಲಕ್ಕೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ 'ಜನ ಮೆಚ್ಚಿದ ಶಿಕ್ಷಕಿ' ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಕೆ. ಕಲಾವತಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, "ಶಿಕ್ಷಕರ ಸನ್ಮಾರ್ಗದರ್ಶನದಲ್ಲಿ ಮಕ್ಕಳ ಜೀವನ ಸಾಗಿದಾಗ ಸಾರ್ಥಕವಾಗುತ್ತದೆ. ಶಿಕ್ಷಕರು ಮುಂದೆ, ಮಕ್ಕಳು ಹಿಂದೆ ಜೊತೆಯಾಗಿ ಸಾಗುವುದು ಒಳಿತು" ಎಂದು ಅಭಿಪ್ರಾಯಪಟ್ಟರು.
ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀ ಶ್ರೀನಿವಾಸ ಕುಳಾಯಿ ಮಾತನಾಡಿ, "ಶಿಕ್ಷಕರು ನೀಡುವ ಜ್ಞಾನ ಮಕ್ಕಳ ಬದುಕಿಗೆ ಬೆಳಕಾದರೆ, ಅವರು ನೀಡುವ ಮಾರ್ಗದರ್ಶನ ಮಕ್ಕಳ ಹೆಜ್ಜೆಗಳಿಗೆ ದಿಕ್ಕಾಗುತ್ತದೆ" ಎಂದು ಗುರುನಮನ ಸಲ್ಲಿಸಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಶಶಿಕುಮಾರ್ ಕೆ. ಸಿ. ರವರು ಮಾತನಾಡಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳ ಸಕ್ರಿಯ ಸಹಕಾರದಿಂದ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಮೂಡಿಬಂದಿದೆ ಎಂದು ಪ್ರಶಂಸಿಸಿದರು.
ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಪ್ರವೀಣ್ ಸಿಪ್ರಿ ಸ್ವಾಗತಿಸಿದರು. ರಕ್ಷಕ-ಶಿಕ್ಷಕ ಸಂಘದ ನಿಕಟಪೂರ್ವ ಅಧ್ಯಕ್ಷೆ ಡಾ. ರಚನಾ ಕೊರಕೋಡು ಕಾರ್ಯಕ್ರಮ ನಿರೂಪಿಸಿದರು. ದೀಪಾ ಶೆಟ್ಟಿ ಧನ್ಯವಾದ ಸಮರ್ಪಿಸಿದರು.
ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳು ಜರಗಿದವು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


