ಪರಿಣಾಮಕಾರಿ ಕಾರ್ಯನಿರ್ವಹಣೆಗೆ ತರಬೇತಿ ಅಗತ್ಯ: ಡಾ. ಗಣನಾಥ ಶೆಟ್ಟಿ ಎಕ್ಕಾರು

Upayuktha
0


ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್‌ಕ್ರಾಸ್‌ದ ಸಹಯೋಗದಲ್ಲಿ ಮಂಗಳೂರು ವಿ.ವಿ.ಯುವ ರೆಡ್‌ಕ್ರಾಸ್ ಕಾರ್ಯಕ್ರಮ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಶಿಬಿರ ರೆಡ್‌ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ಬುಧವಾರ ನಡೆಯಿತು.


ಕಾರ್ಯಕ್ರಮ ಉದ್ಘಾಟಿಸಿದ ಯುವ ರೆಡ್‌ಕ್ರಾಸ್ ರಾಜ್ಯ ಸಂಯೋಜಕ ಡಾ. ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ "ಶಾಲಾ, ಕಾಲೇಜುಗಳಲ್ಲಿ ಯುವ ರೆಡ್‌ಕ್ರಾಸ್, ಎನ್‌ಸಿಸಿ, ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್  ಘಟಕಗಳು ಕಾನೂನಾತ್ಮಕವಾಗಿ ರಚನೆಯಾಗಿದ್ದು, ಇದರ ಕಾರ್ಯಕ್ರಮ ಅಧಿಕಾರಿಗಳಿಗೆ ಮಹತ್ವದ ಜವಾಬ್ದಾರಿ ಇದೆ. ಯುವ ರೆಡ್‌ಕ್ರಾಸ್ ಧ್ಯೇಯೋದ್ದೇಶಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಹಾಗೂ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತರಬೇತಿ ನೆರವಾಗುತ್ತದೆ 'ಎಂದರು.


ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ರೆಡ್‌ಕ್ರಾಸ್‌ನ ಚೇರ್ಮನ್ ಸಿಎ ಶಾಂತಾರಾಮ್ ಶೆಟ್ಟಿ ಮಾತನಾಡಿ "ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆ ಮಂಗಳೂರು ವಿ.ವಿ.ಯುವ ರೆಡ್‌ಕ್ರಾಸ್‌ನ ಬಲವರ್ಧನೆಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.


ಜಿಲ್ಲಾ ರೆಡ್‌ಕ್ರಾಸ್‌ನ ಆಡಳಿತ ಮಂಡಳಿ ಸದಸ್ಯ ಪಿ.ಬಿ.ಹರೀಶ್ ರೈ, ಯುವ ರೆಡ್‌ಕ್ರಾಸ್ ಉಪ ಸಮಿತಿ ನಿರ್ದೇಶಕಿ ಡಾ. ಸುಮನಾ ಬೋಳಾರ್, ಯೇನೆಪೊಯ ವಿ.ವಿ. ಯುವ ರೆಡ್‌ಕ್ರಾಸ್‌ನ ನೋಡಲ್ ಅಧಿಕಾರಿ ಡಾ.ನಿತ್ಯಶ್ರೀ. ಬಿ.ವಿ. ಉಪಸ್ಥಿತರಿದ್ದರು.


ಮಂಗಳೂರು ವಿ.ವಿ. ಯುವ ರೆಡ್‌ಕ್ರಾಸ್‌ನ ನೋಡಲ್ ಅಧಿಕಾರಿ ಡಾ.ಗಾಯತ್ರಿ.ಎನ್. ಸ್ವಾಗತಿಸಿ, ರೆಡ್‌ಕ್ರಾಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ಸತೀಶ್‌ಕುಮಾರ್ ಶೆಟ್ಟಿ ವಂದಿಸಿದರು. ಮಿಲಾಗ್ರಿಸ್ ಕಾಲೇಜಿನ ಯುವ ರೆಡ್‌ಕ್ರಾಸ್ ಕಾರ್ಯಕ್ರಮ ಅಧಿಕಾರಿ ಸುಶ್ಮಿತಾ ಶೈಲಾ ಮೊರಾಸ್ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top