ತುಳು ಭಾಷೆಗೆ ಅಧಿಕೃತ ಭಾಷೆ ಸ್ಥಾನಮಾನ: ಶಾಸಕ ಕಾಮತ್ ಆಗ್ರಹ

Upayuktha
0

 


ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಬೇಕೆಂಬ ತುಳುವರ ಒಕ್ಕೊರಲ ಬೇಡಿಕೆಯನ್ನು ಪರಿಗಣಿಸಿ ಸೆಪ್ಟೆಂಬರ್ 18 ರಂದು ಮಂಗಳೂರಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟದಲ್ಲಿ ಅಂತಿಮ ನಿರ್ಣಯ ಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ ಕಾಮತ್ ರವರು ಸರ್ಕಾರಕ್ಕೆ ಆಗ್ರಹಿಸಿದರು.


ಈ ಬಗ್ಗೆ ನಾನು ಶಾಸಕನಾದಾಗಿನಿಂದಲೂ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ, ತುಳು ಪರ ಹೋರಾಟಗಾರರೊಂದಿಗೆ ತುಳು ಲಿಪಿ ಶಾಸನ, ಸಾವಿರಾರು ವರ್ಷಗಳ ಇತಿಹಾಸವಿರುವ ತಾಳೆ ಓಲೆಗಳು, ಪಾಡ್ದನ, ದೈವಾರಾಧನೆಯ ನುಡಿಗಳು, ತುಳುನಾಡಿನ ಪುರಾತನ ದೇವಸ್ಥಾನ ಹಾಗೂ ದೈವಸ್ಥಾನಗಳಲ್ಲಿ ಬಳಕೆಯಾದ ತುಳು ಭಾಷೆಯ ಸಂಸ್ಕಾರ, ತುಳು ಸಾಹಿತ್ಯ, ತುಳು ಕ್ಯಾಲೆಂಡರ್, ತುಳು ಪತ್ರಿಕೆ, ಸೇರಿದಂತೆ ಅನೇಕ ಪೂರಕ ದಾಖಲೆಗಳನ್ನು ಹೊಂದಿಸಿಕೊಂಡು ಸರ್ಕಾರಕ್ಕೆ ಪ್ರಸ್ತುತ ಪಡಿಸಲಾಗಿತ್ತು. ಅಂದು ಸಚಿವರಾಗಿದ್ದ ಸುನಿಲ್ ಕುಮಾರ್ ಕಾರ್ಕಳ ರವರು ಡಾ.ಮೋಹನ್ ಆಳ್ವರ ಸಮಿತಿಯನ್ನೂ ರಚಿಸಿದ್ದರು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಸಮಿತಿಯ ವರದಿ ಅನುಷ್ಠಾನಕ್ಕೆ ಬರದಿರುವುದು ಬೇಸರದ ಸಂಗತಿ ಎಂದರು.


ತುಳುವರ ಹೋರಾಟ, ಒತ್ತಾಸೆಗೆ ಅನುಗುಣವಾಗಿ ಬಹುತೇಕ ಕೆಲಸಗಳು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ಪೂರ್ಣಗೊಂಡಿದ್ದು, ಕೊನೆಯ ಹಂತದ ಕಾರ್ಯಗಳು ಮಾತ್ರ ಬಾಕಿ ಇವೆ. ಅದನ್ನು ಶೀಘ್ರದಲ್ಲಿ ಮುಗಿಸುವ ನಿಟ್ಟಿನಲ್ಲಿ ಮಂಗಳೂರಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟದಲ್ಲೇ ಅಂತಿಮ ನಿರ್ಣಯವಾಗಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top