ಉಡುಪಿ: ವಿದ್ಯಾರ್ಥಿಗಳ ಡಿಜಿಟಲ್ ಸಾಕ್ಷರತೆ ಹಾಗೂ ಉದ್ಯೋಗ ಸಿದ್ಧತೆಯನ್ನು ಹೆಚ್ಚಿಸುವ ಉದ್ದೇಶದಿಂದ ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಉದ್ಯೋಗ ಮಾರ್ಗದರ್ಶನ ಮತ್ತು ಪ್ಲೇಸ್ ಮೆಂಟ್ ಸೆಲ್, ಐಕ್ಯುಎಸಿ, ಬೆಂಗಳೂರಿನ ಮೆಂಟರ್ ಟುಗೆದರ್ ಸಹಯೋಗದಲ್ಲಿ ‘ಪ್ರೇರಣಾ’ ಉದ್ಯೋಗ ಸಿದ್ಧತೆ ಮತ್ತು ಮಾರ್ಗದರ್ಶನ ಕಾರ್ಯಕ್ರಮವನ್ನು ಸೋಮವಾರ ಆಯೋಜಿಸಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಹಾಗೂ ಬೆಂಗಳೂರಿನ ಮೆಂಟರ್ ಟುಗೆದರ್‌ನ ಹಿರಿಯ ಸಹಾಯಕ ವಿಜಯಕುಮಾರ್ ಬಿ.ಸಿ. ಅವರು ‘ಮೆಂಟರ್ ಟು ಗೋ’ ಆ್ಯಪ್ ನ್ನು ಪ್ರಾತ್ಯಕ್ಷಿಕೆ ಮೂಲಕ ಪರಿಚಯಿಸಿದರು. ಕೃತಕ ಬುದ್ಧಿಮತ್ತೆಯ ವಿವಿಧ ಅಂಶಗಳನ್ನು ವಿವರಿಸಿದ ಅವರು, ಬದಲಾಗುತ್ತಿರುವ ಉದ್ಯೋಗ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಮಹತ್ವ ಹಾಗೂ ಅದರಿಂದ ರೂಪುಗೊಳ್ಳುತ್ತಿರುವ ಹೊಸ ವೃತ್ತಿ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಪ್ರೊ. ನಿಕೇತನ ಅವರು ವಿದ್ಯಾರ್ಥಿಗಳು ತಂತ್ರಜ್ಞಾನ ಹಾಗೂ ಮಾರ್ಗದರ್ಶನ ವೇದಿಕೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ತಮ್ಮ ವೃತ್ತಿ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾಲೇಜಿನ ಪ್ಲೇಸ್ ಮೆಂಟ್ ಸೆಲ್ ನ ಸಂಚಾಲಕರಾದ ಶರತ್ ಕುಮಾರ್ ಹಾಗೂ ಸಂತೋಷ್ ಪ್ರಭು ಎಂ., ಐಕ್ಯುಎಸಿ ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

