ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಇಲ್ಲಿನ ವಿದ್ಯಾ ಭಾರತಿ ಅಖಿಲ ಭಾರತೀಯ ವಿದ್ಯಾಸಂಸ್ಥಾನಾದ ವತಿಯಿಂದ ಆಯೋಜಿಸಲಾಗಿದ್ದ ನಮಾಮಿ ಭಾರತಂ ಸಮೂಹ ಗಾಯನದ ಕಾರ್ಯಕ್ರಮದ ಅಂಗವಾಗಿ ವಂದೇ ಮಾತರಂ ಗೀತೆಯ 150ನೇ ವರ್ಷದ ಸಂಭ್ರಮವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಬಯಲು ರಂಗಮಂದಿರದಲ್ಲಿ ಎಲ್ಲಾ ವಿದ್ಯಾರ್ಥಿಗಳು ವಂದೇ ಮಾತರಂ ಗೀತೆಯನ್ನು ಸಾಮೂಹಿಕವಾಗಿ ಗಾಯನ ಮಾಡಿದರು. ದೇಶಭಕ್ತಿ ಮತ್ತು ರಾಷ್ಟ್ರ ಅಭಿಮಾನವನ್ನು ಮೂಡಿಸುವ ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ ಶ್ರೀಕೃಷ್ಣ ಗಣರಾಜ ಭಟ್ ಎಸ್, ಐಕ್ಯೂಎಸಿ ಘಟಕದ ಸಂಯೋಜಕಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರವಿಕಲಾ ಹಾಗೂ ಕಾಲೇಜಿನ ಆಡಳಿತ ಮಂಡಳಿಯ ವಿಶೇಷ ಅಧಿಕಾರಿ ಡಾ ಮನಮೋಹನ ಎಂ ಮತ್ತು ಅಧ್ಯಾಪಕರು, ಅಧ್ಯಾಪಕೇತರರು ವಿದ್ಯಾರ್ಥಿಗಳು ಒಟ್ಟು ಸೇರಿ 1817 ಜನ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.


