ವಿವೇಕಾನಂದ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನೆ

Upayuktha
0

 


ಪುತ್ತೂರು: ಪ್ರಸ್ತುತ ದಿನಗಳಲ್ಲಿ ತಂತ್ರಜ್ಞಾನವು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಮುಖ ಪಾತ್ರ ವಹಿಸುತ್ತಿದೆ. ಸಮಾಜ ಮತ್ತುಉದ್ಯೋಗ ಕ್ಷೇತ್ರದಲ್ಲಾಗುತ್ತಿರುವ ಬದಲಾವಣೆಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳು ಹೊಸ ಜ್ಞಾನ ಹಾಗೂ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಇಂತಹ ಜ್ಞಾನ ಸಂಪಾದನೆಗೆ ಇಂಟರ್ನ್‍ಶಿಪ್‍ಗಳನ್ನು ಮಾಡುವುದರಿಂದ ವಿದ್ಯಾರ್ಥಿಗಳಿಗೆ ಕಾರ್ಪೊರೇಟ್‍ ಕ್ಷೇತ್ರಕ್ಕೆ ಪ್ರವೇಶಿಸುವ ಮೊದಲು ವಿದ್ಯಾರ್ಥಿಗಳು ಆತ್ಮವಿಶ್ವಾಸ, ಸಂವಹನ ಕೌಶಲ್ಯ ಹಾಗೂ ವೃತ್ತಿಪರ ಗುಣಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಕ್ಯಾಂಪ್ಕೋ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಡಾ.ಬಿ.ವಿ.ಸತ್ಯನಾರಾಯಣ ಹೇಳಿದರು.


ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ಇಲ್ಲಿನ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಸಹಯೋಗದಲ್ಲಿ ನಡೆದ ವಾಣಿಜ್ಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿಉದ್ಘಾಟಕರಾಗಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್ ಮಾತನಾಡಿ, ವಿದ್ಯಾರ್ಥಿ ಜೀವನವು ಅತ್ಯಂತ ಶ್ರೇಷ್ಠವಾದ ಹಂತವಾಗಿದ್ದು, ಸಮಾಜದಲ್ಲಿ ವಿದ್ಯಾರ್ಥಿಗಳು ತಮ್ಮನ್ನುತಾವು ಹೇಗೆ ರೂಪಿಸಿಕೊಳ್ಳಬೇಕು ಎಂಬುದನ್ನು ವಿದ್ಯಾರ್ಥಿ ಜೀವನದಲ್ಲಿಯೇ ಅರಿತುಕೊಳ್ಳಬೇಕು. ನಾಲ್ಕು ಗೋಡೆಗಳ ನಡುವಿನ ಕಲಿಕೆಗಿಂತ ಪಠ್ಯೇತರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಜವಾಬ್ದಾರಿ ಹಾಗೂ ಅನುಭವವನ್ನು ಬೆಳೆಸಲು ಇಂತಹ ಸಂಘಗಳಿಂದ ಸಾಧ್ಯ ಎಂದು ಹೇಳಿದರು.


ಈ ಸಂದರ್ಭದಲ್ಲಿಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್‍ಭಟ್ ಹಾಗೂ ಐಕ್ಯೂಎಸಿ ಸಂಯೋಜಕಿ ಮತ್ತು ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರವಿಕಲಾ ಕಾರ್ಯಕ್ರಮಕ್ಕೆ ಶುಭಕೋರಿದರು.


ವೇದಿಕೆಯಲ್ಲಿ ವಾಣಿಜ್ಯ ಸಂಘದ ಸಂಯೋಜಕ ಲೆ. ಭಾಮಿಅತುಲ್ ಶೆಣೈ ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ವಾಣಿಜ್ಯ ಸಂಘದ ಕಾರ್ಯದರ್ಶಿ ಪಾವನ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ದೀಪ್ತಿ ಭಟ್ ವಂದಿಸಿ, ತೃತೀಯ  ವಾಣಿಜ್ಯ ವಿಭಾಗದ ವಿದ್ಯಾರ್ಥಿ ಭೂಮಿಕಾ. ಜಿ ಮತ್ತು ಶ್ರಮಿಕ್. ರೈ ನಿರೂಪಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top