ವಿವೇಕಾನಂದ ಕಾಲೇಜಿನಲ್ಲಿ ಯುವ ಮತದಾರರ ವಿಶೇಷ ಜಾಗೃತಿ ಅಭಿಯಾನ

Upayuktha
0

 


ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ,  ಇಲ್ಲಿನ ಮತದಾರರ ಸಾಕ್ಷರತಾ ಸಂಘ, ರೋವರ್ಸ್ ಮತ್ತು ರೇಂಜರ್ಸ್ ಘಟಕ, ಎನ್‌ಸಿಸಿ ಹಾಗೂ ಐಕ್ಯೂಎಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಯುವ ಮತದಾರರ ವಿಶೇಷ ನೋಂದಣಿ ಅಭಿಯಾನ ಸೋಮವಾರ ನಡೆಯಿತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಯಾಗಿ ಭಾಗವಹಿಸಿದ ಪುತ್ತೂರು ತಾಲೂಕು ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಮಾತನಾಡಿ, ನಮ್ಮ ಸಂವಿಧಾನ ನಮಗೆ ನೀಡಿರುವ ಮಹತ್ವದ ಹಕ್ಕುಗಳಲ್ಲಿ ಮತದಾನದ ಹಕ್ಕು ಕೂಡ ಒಂದು. ನಾವು ಪ್ರತಿದಿನ ಸರ್ಕಾರಕ್ಕೆ ತೆರಿಗೆ ಪಾವತಿಸುತ್ತೇವೆ. ಆದರೆ ಸರ್ಕಾರದ ಹಣ ಎಲ್ಲಿ ಮತ್ತು ಹೇಗೆ ಬಳಕೆಯಾಗುತ್ತಿದೆ ಎಂಬುದನ್ನು ತಿಳಿದುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಆದ್ದರಿಂದ ೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಯಾವುದೇ ಒತ್ತಡಕ್ಕೆ ಒಳಗಾಗದೆ, ಅಭ್ಯರ್ಥಿಗಳ ಬಗ್ಗೆ ತಿಳಿದುಕೊಂಡು ತಮ್ಮ ಮತವನ್ನು ಚಲಾಯಿಸಬೇಕು.


ಮತದಾನ ನಮ್ಮ ಹಕ್ಕು ಮಾತ್ರವಲ್ಲ, ನಮ್ಮ ಜವಾಬ್ದಾರಿಯೂ ಹೌದು. ನಮ್ಮ ಒಂದು ಮತವು ದೇಶದ ಆಡಳಿತದ ದಿಕ್ಕನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಪ್ರತಿಯೊಬ್ಬರೂ ತಮ್ಮ ಮತದಾನದ ಹಕ್ಕನ್ನು ಜಾಗೃತಿಯಿಂದ ಚಲಾಯಿಸಿ, ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು ಎಂದು   ಹೇಳಿದರು.


ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್. ಎಸ್. ಅಧ್ಯಕ್ಷೀಯ ನುಡಿಗಳನ್ನಾಡಿ, ಮತದಾನ ಮಾಡುವ ಮೂಲಕ ಉತ್ತಮ ಹಾಗೂ ಭದ್ರವಾದ ಸರ್ಕಾರವನ್ನು ನಿರ್ಮಿಸುವಲ್ಲಿ ಪ್ರತಿಯೊಬ್ಬ ನಾಗರಿಕನ ಪಾತ್ರವೂ ಮಹತ್ವದ್ದಾಗಿದೆ. ಯುವ ಮತದಾರರು ತಮ್ಮ ಮತದಾನದ ಹಕ್ಕಿನ ಮಹತ್ವವನ್ನು ಅರಿತುಕೊಳ್ಳಬೇಕು ಎಂದು  ಮಾತನಾಡಿದರು .


ಸಭಾ ಕಾರ್ಯಕ್ರಮದ ಬಳಿಕ  ಮತದಾರರ ನೋಂದಣಿ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದಲ್ಲಿ ಮತದಾರರ ಸಾಕ್ಷರತಾ ಸಂಘದ ಸಂಯೋಜಕಿ ಹಾಗೂ ವ್ಯವಹಾರ ಆಡಳಿತ  ವಿಭಾಗದ  ಉಪನ್ಯಾಸಕಿ ದೀಪಿಕಾ ಎಸ್ ಉಪಸ್ಥಿತರಿದ್ದರು.


ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಪ್ರಮೋದ್ ಎಂ. ಜಿ. ಸ್ವಾಗತಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಭಾಗ್ಯಶ್ರೀ ವಂದಿಸಿ, ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿಯರಾದ ಧನ್ಯಶ್ರೀ ಹಾಗೂ ಶಿವಾನಿ ಕಾರ್ಯಕ್ರಮ ನಿರೂಪಿಸಿದರು.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top