ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓಣಂ ಆಚರಣೆ

Upayuktha
0

  


ಪುತ್ತೂರು: ದೇವರನಾಡು ಎಂದೇ ಖ್ಯಾತಿ ಪಡೆದ ಕೇರಳದ ಸಾಂಪ್ರದಾಯಿಕ ಪ್ರಾಚೀನ ಓಣಂ ಹಬ್ಬವು ಇಂದು ಕೇರಳದಲ್ಲಿ ಮಾತ್ರ ಆಚರಿಸುವ ಹಬ್ಬವಾಗಿ ಉಳಿದಿಲ್ಲ ಬದಲಾಗಿ ದೇಶದ ಮೂಲೆ ಮೂಲೆಯಲ್ಲಿಯೂ ಆಚರಿಸಲ್ಪಡುತ್ತದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಹೇಳಿದರು..


ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಯಲ್ಲಿ ನಡೆದ ಆರವಂ-2026 ಓಣಂ ಸಂಭ್ರಮಾಚರಣೆಯಲ್ಲಿ ಮಾತಾಡಿದರು. ಮಹಾಬಲಿಯು ಪ್ರತಿವರ್ಷವೂ ಓಣಂ ಸಂದರ್ಭದಲ್ಲಿ ಭೂಮಿಗೆ ಮರಳಿ ಬಂದು ಜನರ ಕಷ್ಟಗಳನ್ನು ನಿವಾರಿಸುತ್ತಾನೆ ಎನ್ನುವ ನಂಬಿಕೆ ಇದೆ. ಇದರಿಂದಾಗಿ ಈ ಹಬ್ಬವು ಅತ್ಯಂತ ಮಹತ್ವದ್ದಾಗಿದೆ. ಪ್ರಕೃತಿಯ ಆರಾಧನೆಗೆ ಮಹತ್ವವನ್ನು ನೀಡುವ ನಮ್ಮ ಮಾತೃಭೂಮಿಯ ಸಾಂಪ್ರದಾಯಗಳನ್ನು ಮತ್ತು ಆಚರಣೆಗಳನ್ನು ಎಂದಿಗೂ ಮರೆಯಬಾರದು. ನಮ್ಮ ನೆಲ, ಜಲದ ರಕ್ಷಣೆ ಎಲ್ಲರ ಆದ್ಯ ಕರ್ತವ್ಯವಾಗಬೇಕು ಎಂದರು. 


ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ವಿಷ್ಣುವಿನ ದಶಾವತಾರಗಳಲ್ಲಿ ವಾಮನ ಅವತಾರದ ಮಹತ್ವವನ್ನು ತಿಳಿಸುವ ಈ ಹಬ್ಬದ ಆಚರಣೆಯು ವಿಶ್ವವ್ಯಾಪಿಯಾಗಲಿ. ದಯಾಮಯನಾದ ಭಗವಂತನು ಎಲ್ಲರನ್ನೂ ಅನುಗ್ರಹಿಸಲಿ ಎಂದು ಹಾರೈಸಿದರು.  


ಓಣಂ ಹಬ್ಬದ ಪ್ರಯುಕ್ತ ಬೃಹತ್ ಪೂಕಳಂನ್ನು ನಿರ್ಮಿಸಲಾಗಿತ್ತು. ಈ ಹಬ್ಬದ ಹಿನ್ನೆಲೆಯನ್ನು ವಿದ್ಯಾರ್ಥಿಗಳು  ನೃತ್ಯದ ಮೂಲಕ ಪ್ರಸ್ತುತಪಡಿಸಿದರು. ಕೇರಳದ ಸಾಂಪ್ರದಾಯಿಕ ನೃತ್ಯ ತಿರುವತ್ತಿರಕಳಿಯನ್ನು ವಿದ್ಯಾರ್ಥಿನಿಯರು ಅಭಿನಯಿಸಿದರು. ನಂತದ ಚೆಂಡೆ ಮೇಳ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಹಗ್ಗ ಜಗ್ಗಾಟ ಸ್ಪರ್ಧೆಯನ್ನೂ ಏರ್ಪಡಿಸಲಾಗಿತ್ತು. ನೆರೆದಿದ್ದ ಎಲ್ಲಾ ವಿಭಾಗ ಮುಖ್ಯಸ್ಥರಿಗೆ, ಉಪನ್ಯಾಸಕರಿಗೆ, ಸಿಬ್ಬಂದಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಪಾಯಸ ಹಾಗೂ ಸಿಹಿ ತಿಂಡಿ ವಿತರಿಸಿ ಸಂಭ್ರಮಿಸಲಾಯಿತು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top