ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಮಹಿಳಾ ಕ್ರಾಸ್ ಕಂಟ್ರಿ ತಂಡಕ್ಕೆ ಪ್ರಥಮ ರನ್ನರ್ ಅಪ್ ಪ್ರಶಸ್ತಿ

Shreya Hegde
0




ಪುತ್ತೂರು: ಮೈಸೂರಿನ ವಿಟಿಯು ಪ್ರಾದೇಶಿಕ ಕೇಂದ್ರದಲ್ಲಿ ನಡೆದ ೨೮ನೇ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ (VTU) ಮಟ್ಟದ ಅಂತರ್‌ಕಾಲೇಜು ಕ್ರಾಸ್-ಕಂಟ್ರಿ ಸ್ಪರ್ಧೆಯ ಮಹಿಳೆಯರ ವಿಭಾಗದಲ್ಲಿ, ಇಲ್ಲಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿನಿಯರ ತಂಡವು ‘ಪ್ರಥಮ ರನ್ನರ್-ಅಪ್’ ಪ್ರಶಸ್ತಿಯನ್ನು ಪಡೆದುಕೊಂಡಿದೆ.


ಸಾಧಕ ತಂಡದಲ್ಲಿ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಅರ್ಪಿತಾ ಬಾಲಚಂದ್ರ ನಾಯ್ಕ್, ತೃತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ಅನಘಾ ಕೆ.ಎನ್, ದ್ವಿತೀಯ ವರ್ಷದ ಎಐಎಂಎಲ್ ವಿಭಾಗದ ಸಿಂಚನಾ ಬಿ.ಆರ್, ದ್ವಿತೀಯ ವರ್ಷದ ಡೇಟಾ ಸೈನ್ಸ್ ವಿಭಾಗದ ವಾಣಿ ಲಕ್ಷ್ಮಣ್ ಲಮಾಣಿ, ದ್ವಿತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ಅನನ್ಯ ಕೆ.ಬಿ ಹಾಗೂ ಪ್ರಥಮ ವರ್ಷದ ಮೆಕ್ಯಾನಿಕಲ್ ವಿಭಾಗದ ಬಬಿತಾ ಯು ಭಾಗವಹಿಸಿದ್ದರು.



ರಾಷ್ಟ್ರಮಟ್ಟಕ್ಕೆ ಬಬಿತಾ ಆಯ್ಕೆ:

ಸ್ಪರ್ಧೆಯಲ್ಲಿ ತನಿಷ್ಟ ಸಾಧನೆ ಮೆರೆದು ೪ನೇ ಸ್ಥಾನ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿನಿ ಬಬಿತಾ ಯು, ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಕ್ರಾಸ್-ಕಂಟ್ರಿ ಓಟದ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲು ಅರ್ಹತೆ ಪಡೆದುಕೊಂಡಿದ್ದಾರೆ.


ವಿಜೇತ ತಂಡಕ್ಕೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನ ನೀಡಿದ್ದರು ಎಂದು ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ ಕೆ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಧಕ ವಿದ್ಯಾರ್ಥಿನಿಯರು ಹಾಗೂ ಮಾರ್ಗದರ್ಶಕರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top