ವಿವೇಕಾನಂದ ಮಹಾವಿದ್ಯಾಲಯದಲ್ಲಿ ‘ಎಥಿಕಲ್ ಹ್ಯಾಕಿಂಗ್’ ವಿಶೇಷ ಕಾರ್ಯಾಗಾರ

Shreya Hegde
0



 ಪುತ್ತೂರು : ವಿವೇಕಾನಂದ (ಸ್ವಾಯತ್ತ) ಮಹಾವಿದ್ಯಾಲಯದ ಗಣಕಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿ (IQAC) ಘಟಕದ ಜಂಟಿ ಆಶ್ರಯದಲ್ಲಿ 'ಎಥಿಕಲ್ ಹ್ಯಾಕಿಂಗ್' ಕುರಿತು ಪ್ರಾಯೋಗಿಕ ಕಾರ್ಯಾಗಾರ ನಡೆಯಿತು.


ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಬೆಂಗಳೂರಿನ ರಿಇನ್‌ಪೋಸೆಕ್ ಸಂಸ್ಥೆಯ ನಿರ್ದೇಶಕ ಹಾಗೂ ಮುಖ್ಯ ತಂತ್ರಜ್ಞಾನ ಅಧಿಕಾರಿ ಸಮರ್ಥ್ ಭಾಸ್ಕರ್ ಭಟ್, ಇಂದಿನ ಕಾಲಘಟ್ಟದಲ್ಲಿ ಹ್ಯಾಕಿಂಗ್ ತಂತ್ರಜ್ಞಾನದ ಅಭಿವೃದ್ಧಿಯ ಮುಖ್ಯ ಅಡಿಪಾಯವಾಗಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ವಿಶೇಷ ಪರಿಣಿತಿ ಹೊಂದಲು ಇದರ ಅಗತ್ಯವಿದ್ದು, ಸಾಮಾಜಿಕ ಜಾಲತಾಣ ಮತ್ತು ಡಿಜಿಟಲ್ ಉತ್ಪನ್ನಗಳನ್ನು ಸರಿಯಾದ ರೀತಿಯಲ್ಲಿ ಬಳಸುವುದರ ಮೂಲಕ ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿ ಮಾಡಿಕೊಳ್ಳಬಹುದು. ಇದು ಸ್ವಂತ ಕಂಪನಿ ಪ್ರಾರಂಭಿಸಲು ಹಾಗೂ ದೈನಂದಿನ ಜೀವನಕ್ಕೂ ಅನ್ವಯಿಸುತ್ತದೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಎಸ್., ಶಿಕ್ಷಣದಿಂದ ಹಿಡಿದು ಆರೋಗ್ಯ ಮತ್ತು ಆಡಳಿತದವರೆಗೆ ಡಿಜಿಟಲ್ ಸೇವೆಗಳು ವಿಸ್ತಾರಗೊಂಡಿದ್ದು, ತಂತ್ರಜ್ಞಾನ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ತಂತ್ರಜ್ಞಾನ ಬೆಳೆದಂತೆ ಸೈಬರ್ ಅಪರಾಧಗಳೂ ಹೆಚ್ಚುತ್ತಿದ್ದು, ವೈಯಕ್ತಿಕ ಮಾಹಿತಿಗಳನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು ಎಲ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top