ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Upayuktha
0

 


ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಹಾಕಿ ಮಾಂತ್ರಿಕ ಮೇಜರ್‍ ಧ್ಯಾನ್‍ಚಂದ್ ಅವರ ಜನ್ಮದಿನದ ಅಂಗವಾಗಿ 'ರಾಷ್ಟ್ರೀಯ ಕ್ರೀಡಾ ದಿನಾಚರಣೆ'ಯನ್ನು ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕುಮಾರಿ ಪರಿಣಿತಾ ಅವರು ಧ್ಯಾನ್‍ಚಂದ್‍ ಅವರ ಸಾಧನೆ, ದೇಶಪ್ರೇಮ ಹಾಗೂ ಅವರ ಕ್ರೀಡಾ ಜೀವನದ ರೋಚಕ ಕ್ಷಣಗಳ ಕುರಿತು ಮಾತನಾಡಿದರು. ಧ್ಯಾನ್‍ಚಂದ್ ಅವರ ಶಿಸ್ತು ಮತ್ತು ಕ್ರೀಡಾ ಸ್ಫೂರ್ತಿ ಇಂದಿನ ಯುವ ಪೀಳಿಗೆಗೆ ಹೇಗೆ ಮಾದರಿಯಾಗಬೇಕು ಎಂಬುದನ್ನು  ಮನವರಿಕೆ ಮಾಡಿಕೊಟ್ಟರು.


ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ, ಎಮ್. ದೈಹಿಕ ಶಿಕ್ಷಣ ನಿರ್ದೇಶಕಿ ಡಾ. ಜ್ಯೋತಿ ಕುಮಾರಿ ಪಿ.ಸಿ. ಹಾಗೂ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ನಳಿನಾ ಕುಮಾರಿ ಎ. ಎನ್ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದದವರು ಭಾಗವಹಿಸಿದರು. ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಡಿಂಪಲ್ ಶೆಟ್ಟಿ ಸ್ವಾಗತಿಸಿ, ವಂದಿಸಿ ಕಾರ್ಯಕ್ರಮ ನಿರೂಪಿಸಿದರು.



إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top